ಗ್ಯಾರಂಟಿ ನಂಬಬೇಡಿ, ಬಿಜೆಪಿಗೆ ಮತ ಹಾಕಿಕನ್ನಡಪ್ರಭ ವಾರ್ತೆ ಗುಳೇದಗುಡ್ಡ: ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ವಿರೋಧ ಪಕ್ಷಗಳು ಮೊದಲು ಅದನ್ನು ತಿಳಿದುಕೊಳ್ಳಲಿ. ಪ್ರವಾಸಿ ತಾಣ, ರೈಲ್ವೆ ನಿಲ್ದಾಣ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹೀಗೆ ಹಲವಾರು ಯೋಜನೆಗಳಿಗೆ ಸಾವಿರಾರು ಕೋಟಿ ತಂದು ಅಭಿವೃದ್ಧಿ ಮಾಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಬಿಜೆಪಿ ಬೆಂಬಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.