ಸಾಧನೆಗೆ ಪ್ರಾಮಾಣಿಕ ಪ್ರಯತ್ನ ಬೇಕುಕನ್ನಡಪ್ರಭ ವಾರ್ತೆ ಮುಧೋಳ: ಜೀವನದಲ್ಲಿ ಏನಾದರು ಸಾಧನೆ ಮಾಡಬೇಕಾದರೆ ಒಳ್ಳೆಯ ಗುರಿ, ಉದ್ದೇಶ, ಪ್ರಾಮಾಣಿಕ ಪ್ರಯತ್ನ ಬೇಕು. ಹೀಗಿದ್ದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಡಾ.ಟಿ.ವಿ.ಅರಳಿಕಟ್ಟಿಯವರ ಸಾಧನೆ ಇತರರಿಗೂ ಮಾದರಿಯಾಗಿದೆ ಎಂದು ಚಿತ್ರನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಜಯ ರಾಘವೇಂದ್ರ ಹೇಳಿದರು.