ವಿಕಲಚೇತನರಿಂದ ಮತದಾನ ಜಾಗೃತಿ ಜಾಥಾಬಾದಾಮಿ: ಮೇ.7 ರಂದು ಜರುಗಲಿರುವ ಲೋಕಸಭಾ ಚುನಾವಣೆ ನಿಮಿತ್ತ ವಿಕಲಚೇತನರಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ತಾ.ಪಂ, ತಾಲೂಕಾಡಳಿತ, ಜಿಲ್ಲಾಡಳಿತ, ಸ್ವೀಪ್ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಗರದ ಪಿಕಾರ್ಡ ಬ್ಯಾಂಕ್ ಆವರಣದಿಂದ ಆರಂಭವಾದ ಜಾಗೃತಿ ಜಾಥಾ ಮುಖ್ಯ ರಸ್ತೆ, ರಾಮದುರ್ಗ ಸರ್ಕಲ್, ಅಂಬೇಡ್ಕರ ಸರ್ಕಲ್, ಗುಹಾಂತರ ದೇವಾಲಯ ಎದುರುಗಡೆ ವರೆಗೆ ನಡೆಯಿತು.