ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮತದಾನ ಅವಶ್ಯಮುಧೋಳ: ಭಾರತ ದೇಶದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಗೊಳಿಸಲು ಪ್ರತಿ ಮತದಾರರು ಮತದಾನ ಮಾಡುವುದು ಅವಶ್ಯವಾಗಿದೆ ಎಂದು ತಹಸೀಲ್ದಾರ ವಿನೋಧ ಹತ್ತಳ್ಳಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಸ್ವೀಪ್ ಸಮಿತಿ ಮುಧೋಳ ಇವರ ಸಹಯೋಗದಲ್ಲಿ ಬುಧವಾರ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಯಾರಿಗೂ ಹೆದರದೆ ನಿರ್ಭೀತಿಯಿಂದ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ 18 ವರ್ಷ ಮೇಲ್ಪಟ್ಟವರು ಮತದಾನ ಮಾಡಬೇಕು ಎಂದರು.