ಹೀಟ್ ಸ್ಟ್ರೋಕ್ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಜಾನಕಿ ಕೆ.ಎಂ.ಬಾಗಲಕೋಟೆ ಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಹೆಚ್ಚು ಜನಸಂದಣಿ, ಮಾರುಕಟ್ಟೆ ಪ್ರದೇಶ, ಕಟ್ಟಡ ನಿರ್ಮಾಣ, ನರೇಗಾ ಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸೂಕ್ತ ಮುನ್ನಚ್ಚರಿಕೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.