ಐಹೊಳೆ ಶ್ರೀ ರಾಮಲಿಂಗೇಶ್ವರ ಅದ್ಧೂರಿ ರಥೋತ್ಸವಐತಿಹಾಸಿಕ ಐಹೊಳೆಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಮಹಾರಥೋತ್ಸವ ಶುಕ್ರವಾರ ಅದ್ಧೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವ ನಿಮಿತ್ತ ಬೆಳಗ್ಗೆ ಶ್ರೀ ರಾಮಲಿಂಗೇಶ್ವರ ದೇವರಿಗೆ ಮಹಾ ರುದ್ರಾಭಿಷೇಕ, ಬಿಲ್ವಾರ್ಚನೆ, ಅಲಂಕಾರ ಜರುಗಿದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಕಳಸದ ಮೆರವಣಿಗೆ ಜರುಗಿತು. ಸಂಜೆ 6 ಗಂಟೆಗೆ ಮಹಾ ರಥೋತ್ಸವ ಜರುಗಿತು.