ವಿದ್ಯಾಚೇತನ ಶಾಲೆಗೆ ಡಾ.ಸಿ.ಎಸ್.ದ್ವಾರಕಾನಾಥ್ ಭೇಟಿಕನ್ನಡಪ್ರಭ ವಾರ್ತೆ ಲೋಕಾಪುರಪಟ್ಟಣದ ವಿದ್ಯಾಚೇತನ ಶಾಲೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರು ಡಾ. ಸಿ.ಎಸ್ ದ್ವಾರಕಾನಾಥ್ ಈಚೆಗೆ ಭೇಟಿ ನೀಡಿದರು. ಶಾಲಾ ಮಕ್ಕಳಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ರಚನೆ, ಸಮಾನತೆ, ಸಹಬಾಳ್ವೆ ಪ್ರತಿಪಾದನೆಯ ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.