ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಶಾಸಕ ಜೆ.ಟಿ. ಪಾಟೀಲರಾಜ್ಯದ ಬಡಜನರಿಗೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದ ಈ ಯೋಜನೆಗಳು ಬಹಳಷ್ಟು ಅನುಕೂಲವಾಗಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಿ ಸ್ವ ಉದ್ಯೋಗ ಮಾಡುತ್ತಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.