ಶಿವಾಜಿ ಮಹಾರಾಜರ ಜೀವನಾದರ್ಶ ಯುವಕರಿಗೆ ಸ್ಫೂರ್ತಿ: ಲೋಕಣ್ಣ ಕತ್ತಿಲೋಕಾಪುರ: ಪಟ್ಟಣದ ಶಿವಾಜಿ ವೃತ್ತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಮರಾಠ ಸಮಾಜದವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖಂಡ ಲೋಕಣ್ಣ ಕತ್ತಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿ, ಶಿವಾಜಿ ಮಹಾರಾಜರು ಇಡೀ ಮಾನವ ಸಮುದಾಯದ ಏಳಿಗೆಗಾಗಿ ನಿಸ್ವಾರ್ಥದಿಂದ ಶ್ರಮಿಸಿದ್ದಾರೆ. ಶಿವಾಜಿ ಮಹಾರಾಜರ ಜೀವನ ಸಂದೇಶಗಳ ಬಗ್ಗೆ ಯುವ ಪೀಳಿಗೆಗೆ ಪರಿಚಯಿಸುವುದಲ್ಲದೆ,ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.