ಮಕ್ಕಳಲ್ಲಿ ಪ್ರಾಚ್ಯಪ್ರಜ್ಞೆ ಜ್ಞಾನ ಅವಶ್ಯಕ: ಎಂಎಲ್ಸಿ ಪಿ.ಎಚ್.ಪೂಜಾರಬಾಗಲಕೋಟೆ: ನವನಗರದ ಕಲಾಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಾಚ್ಯಪ್ರಜ್ಞೆ ರಾಜ್ಯಮಟ್ಟದ ಸ್ಪರ್ಧೆ ಮತ್ತು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾತನಾಡಿ, ಮಕ್ಕಳಲ್ಲಿ ದೇಶದ ಇತಿಹಾಸ, ಪರಂಪರೆಗಳ ಹಾಗೂ ಸಂಸ್ಕೃತಿಗಳ ಮಹತ್ವದ ಅರಿವು ಮೂಡಿಸುವುದು ಅವಶ್ಯವಾಗಿದೆ ಎಂದು ಹೇಳಿದರು. ಸ್ಪರ್ಧೆಯಲ್ಲಿ ವಿಜೇತರಿಗೆ ಗಣ್ಯರು ಬಹುಮಾನ ನೀಡಿದರು.