ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಮತದಾರರಿಗೆ ಮತ ಚಲಾಯಿಸುವುದರ ಬಗ್ಗೆ ಇವಿಎಂ, ವಿವಿಪ್ಯಾಟ್, ಬ್ಯಾಲೇಟ್ ಮಷೀನ್ಗಳ ಮಾಹಿತಿ ಅಭಿಯಾನ ಹಮ್ಮಿಕೊಳ್ಳಲಾಗಿದೆಯೆಂದು ಚುನಾವಣಾ ಸೆಕ್ಟರ್ ಅಧಿಕಾರಿ ಎಸ್.ಎಂ. ಕಲಬುರ್ಗಿವರು ಹೇಳಿದರು.
ದೇಶದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.
ರಾಜ್ಯ ಸರ್ಕಾರ ರೂಪಿಸುತ್ತಿರುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಸ್ಥಿತಿ ಸುಧಾರಿಸಿಕೊಂಡು ಸುಖಮಯ ಜೀವನಕ್ಕೆ ಮುನ್ನುಡಿ ಬರೆಯಬೇಕೆಂದು ಶಾಸಕ, ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಸಲಹೆ ನೀಡಿದ್ದಾರೆ.
ಈ ದೇಶದ ಪ್ರತಿಯೊಬ್ಬರೂ ಎಷ್ಟೇ ಶಿಕ್ಷಣವಂತರಾಗಿದ್ದಾಗ್ಯೂ ನಮ್ಮ ಸಂವಿಧಾನ ಓದಿದಾಗ ನಾವು ರೂಪುಗೊಳ್ಳುವುದೇ ಬೇರೆ. ಹೀಗಾಗಿ ಸಂವಿಧಾನದ ಓದು ಹಾಗೂ ಅರಿವು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಹೇಳಿದರು.
ಬಿ.ಜಿ.ಎಲ್ ಸ್ವಾಮಿಯವರು ಜನ ಸಾಮಾನ್ಯರಿಗೆ ಅರ್ಥವಾಗುವಂತೆ ಮತ್ತು ಅವರ ಬದುಕಿಗೆ ಸಂಬಂಧಿಸಿದಂತೆ ವೈಜ್ಞಾನಿಕ ವಿಷಯಗಳನ್ನು ತಿಳಿಸಿಕೊಟ್ಟರಲ್ಲದೆ, ವೈಜ್ಞಾನಿಕ ಬರಹಗಳಿಂದ ಸಸ್ಯಶಾಸ್ತ್ರದ ವಿಖ್ಯಾತ ವಿಜ್ಞಾನಿಗಳ ಗಮನ ಸೆಳೆದವರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಟಿ.ಬಿ. ಕೋರಿಶೆಟ್ಟಿ ಹೇಳಿದರು.
ಮಹಾಲಿಂಗಪುರದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ನಡೆದ ಇಬ್ರಾಹಿಂ ಸುತಾರ ದ್ವಿತೀಯ ಪುಣ್ಯಸ್ಮರಣೆ, ಭಾವೈಕ್ಯ ದಿನೊತ್ಸವ ಹಾಗೂ ಭಾವೈಕ್ಯ ಶ್ರೀ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸರ್ವಧರ್ಮಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಆರ್ಥಿಕ ಸ್ವಾವಲಂಬನೆಗೆ ತರಬೇತಿಗಳು ಅಗತ್ಯ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಸದುಪಯೋಗಪಡಿಸಿಕೊಳ್ಳಿ ಎಂದು ಮಾಜಿ ಶಾಸಕ ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.