10ರಿಂದ ಮೂರು ದಿನಗಳ ಕಾಲ ತೋಟಗಾರಿಕೆ ಮೇಳ: ಡಾ.ಎನ್.ಕೆ. ಹೆಗಡೆಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಸಕ್ತ ಸಾಲಿಗೆ ಬರ ಸಂಹಿಷ್ಣುತೆಗಾಗಿ ತೋಟಗಾರಿಕೆ ಎಂಬ ಧ್ಯೇಯ ವಾಕ್ಯದೊಂದಿಗೆ ಫೆ.10, 11 ಹಾಗೂ 12ರಂದು ಮೂರು ದಿನಗಳ ಕಾಲ ತೋಟಗಾರಿಕೆ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ತೋವಿವಿಯ ಕುಲಪತಿ ಡಾ.ಎನ್.ಕೆ. ಹೆಗಡೆ ತಿಳಿಸಿದರು. ತೋವಿವಿಯ ವಿಸ್ತರಣಾ ನಿದೇರ್ಶನಾಲಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಪ್ರತಿ ತೋಟಗಾರಿಕೆ ಮೇಳ ರೈತರಲ್ಲಿ ಅಪೇಕ್ಷಿತ ಧನಾತ್ಮಕ ಬದಲಾವಣೆ ತರುವ ಅವಕಾಶ ಒದಗಿಸುತ್ತಿದ್ದು, ಪ್ರತಿ ವರ್ಷ ಒಂದೊಂದು ಧ್ಯೇಯ ವಾಕ್ಯಗಳೊಂದಿಗೆ ತೋಟಗಾರಿಕೆ ಮೇಳ ಆಚರಿಸುತ್ತ ಬರಲಾಗಿದೆ. ಈ ವರ್ಷ ಬರ ಸಂಹಿಷ್ಣುತೆಗಾಗಿ ತೋಟಗಾರಿಕೆ ಎಂಬ ಧ್ಯೇಯ ವಾಕ್ಯದೊಂದಿಗೆ ಜರುಗಿಸುತ್ತಿರುವುದು ವಿಶೇಷವಾಗಿದೆ ಎಂದರು.