ಬಾಗಲಕೋಟೆಯ ಮೂವರು ಶಾಸಕರಿಗೆ ಒಲಿದ ನಿಗಮ-ಮಂಡಳಿಬಾಗಲಕೋಟೆ; ಲೋಕಸಭೆಯ ಚುನಾವಣೆಗೆ ಮುನ್ನ ರಾಜ್ಯ ಸರ್ಕಾರ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಮಾಡಿದ್ದು, ಜಿಲ್ಲೆಯ ಮೂವರು ಶಾಸಕರಿಗೆ ಅವಕಾಶ ನೀಡುವ ಮೂಲಕ ಸರ್ಕಾರ ಜಾಣ ನಡೆ ಪ್ರದರ್ಶಿಸಿದೆ. ಪಕ್ಷ ನಿಷ್ಠೆ, ಹಿರಿತನ ಹಾಗೂ ಸಂಘಟನಾತ್ಮಕವಾಗಿ ಬರುವ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವ ದೃಷ್ಟಿಯಲ್ಲಿ ಬಾಗಲಕೋಟೆ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಾಗಲಕೋಟೆ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ, ಬೀಳಗಿ ಶಾಸಕ ಜೆ.ಟಿ.ಪಾಟೀಲರಿಗೆ ಹಟ್ಟಿ ಚಿನ್ನದ ಗಣಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.