ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸಾಧನೆಗುಳೇದಗುಡ್ಡ: ಇಂದು ಮಹಿಳೆ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಹಿತ್ಯ, ಸಂಗೀತ, ಕೃಷಿ ಹೀಗೆ ಪ್ರತಿ ರಂಗಗಳಲ್ಲಿ ಸಾಧನೆ ಮಾಡಿದ್ದಾಳೆ. ತಾಯಿಯಾಗಿ, ಮಗಳಾಗಿ, ಸೊಸೆಯಾಗಿ, ಹೆಂಡತಿಯಾಗಿ, ಕುಟುಂಬದ ಒಡತಿಯಾಗುವ ಮೂಲಕ ಉತ್ತಮ ಕುಟುಂಬ ಮತ್ತು ಸಮಾಜ ಕಟ್ಟುವಲ್ಲಿ ಅವಳ ಪಾತ್ರ ತುಂಬಾ ಮುಖ್ಯವಾಗಿದೆ. ಹೀಗಾಗಿ ಮಹಿಳೆ ಅಬಲೆಯಲ್ಲ ಸಬಲೆ ಎಂದು ಶ್ರೀ ಜಗದ್ಗುರು ಗುರುಸಿದ್ದೇಶ್ವರ ವಿದ್ಯಾವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ರಾಜು ಜವಳಿ ಹೇಳಿದರು.