ಜೀವನದ ಪರೀಕ್ಷೆ ಗೆಲ್ಲಲು ಕೌಶಲಗಳು ಬೇಕು: ಪ್ರೊ.ಶಿವಲಿಂಗ ಸಿದ್ನಾಳಮಹಾಲಿಂಗಪುರದ ಜೇಸಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ದೀಪದಾನ ಸಮಾರಂಭದಲ್ಲಿ ಮಾತನಾಡಿದ ಪ್ರೊ.ಶಿವಲಿಂಗ ಸಿದ್ನಾಳ ಮಾತನಾಡಿ, ಪರೀಕ್ಷೆಗಳಲ್ಲಿ ಎಲ್ಲರಿಗೂ ಒಂದೇ ಪ್ರಶ್ನೆ ಪತ್ರಿಕೆ ಇರುತ್ತದೆ. ಆದರೆ ಜೀವನದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಒಂದೇ ಆಗಿರುವುದಿಲ್ಲ. ಆ ಪರೀಕ್ಷೆಯಲ್ಲಿ ಗೆಲ್ಲುವ ಕೌಶಲಗಳನ್ನು ಅಳವಡಿಸಿಕೊಳ್ಳಬೇಕು ಎಂದರು.