ವಿವೇಕಾನಂದರ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು: ಅಜಯಕುಮಾರ ಸರನಾಯಕಬೀಳಗಿ: ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ, ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರ ಸಂಘ ಹಾಗೂ ಅನ್ನದಾತ ಸಹಕಾರ ಸಂಘದ ಆಶ್ರಯದಲ್ಲಿ ಸ್ವಾಮಿ ವೀವೇಕಾನಂದರ 161ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡ ವಿವೇಕ ಉತ್ಸವ-8ರಲ್ಲಿ ರೋಬೋಟಿಕ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿ ಮತ್ತೆ ಕಾರ್ಯಾಗಾರವನ್ನು ಮಾಜಿ ಸಚಿವ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಉದ್ಘಾಟಿಸಿದರು. ಜಗತ್ತಿಗೆ ಸಂದೇಶ ಸಾರಿ, ಮಹಾನ್ ನಾಯಕರಾಗಿ ಪ್ರಸಿದ್ಧಿ ಪಡೆದಿರುವ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮ ಜರುಗಿದವು.