ಮೂಲ ಸೌಲಭ್ಯ ಒದಗಿಸದ ಲೇಔಟ್ ಮಾಲೀಕರಿಗೆ ನೋಟಿಸ್: ಶಾಸಕ ಕಾಶಪ್ಪನವರಹುನಗುಂದ: ಅವಧಿ ಮುಗಿದ ಹೊಸ ಬಡಾವಣೆಗಳಿಗೆ ಮೂಲ ಸೌಲಭ್ಯ ಒದಗಿಸದ ಲೇಔಟ್ ಮಾಲೀಕನಿಗೆ ನೋಟಿಸ್ ನೀಡಿ ಕ್ರಮ ಜರುಗಿಸಬೇಕೆಂದು ಶಾಸಕ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣ ಪುರಸಭೆಯಲ್ಲಿ ಸೋಮವಾರ ನಡೆದ ನಗರ ಮೋಜಣಿ, ನಗರೋತ್ಥಾನ್ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬಡಾವಣೆಗೆ ಅಗತ್ಯ ಸೌಲಭ್ಯ ಒದಗಿಸದಿದ್ದರೆ ಸಂಬಂಧಿಸಿದ ಬಡಾವಣೆ ಮಾಲೀಕನಿಗೆ ನೋಟಿಸ್ ನೀಡಿ ರದ್ದುಪಡಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.