ವ್ಯಸನ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳ ಧ್ಯೇಯವಾಗಲಿ: ಕಲ್ಲಪ್ಪಣ್ಣ ಸಬರದಮುಧೋಳ: ಹಿರಿಯ ನಾಗರಿಕರ ವೇದಿಕೆ, ವಚನ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಹಾಗೂ ಎಂ.ಕೆ. ಕಾಲೇಜು ವತಿಯಿಂದ ಸೋಮವಾರ ಎಂ.ಕೆ. ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು. ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಕಲ್ಲಪ್ಪಣ್ಣ ಸಬರದ ಮಾತನಾಡಿ, ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ, ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಲಿದೆ ಎಂದರು.