• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಾಹ ಆಮಂತ್ರಣ ಜೊತೆ ಸಿಯಾರಾಮ್ ವಿಗ್ರಹ ಕಾಣಿಕೆ
ರಬಕವಿ-ಬನಹಟ್ಟಿ: ಮದುವೆ ಸಮಾರಂಭಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸವಿನೆನಪಿಗಾಗಿ ೨ ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪಂಚಲೋಹದ ರಾಮ, ಲಕ್ಷ್ಮಣ ಸೀತೆ ಹಾಗೂ ಹನುಮಂತನ ಮೂರ್ತಿ ನೀಡಿ ಮದುವೆಗೆ ಆಮಂತ್ರಣ ನೀಡುತ್ತಿದ್ದಾರೆ.
ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕೆರೂರ: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ನಾಮಫಲಕ ಹೊತ್ತ ರಥಯಾತ್ರೆ ಗುರುವಾರ ರಾತ್ರಿ ಕೆರೂರ ಪಟ್ಟಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಪುಷ್ಪವೃಷ್ಟಿಗೈದು ಬರಮಾಡಿಕೊಂಡರು.
ರೋಗಿಗಳ ಆರೈಕೆ ಮಾಡುವ ನರ್ಸ್‌ಗಳ ಸೇವೆಗೆ ಬೆಲೆ ಕಟ್ಟಲಾಗದು: ಡಾ.ವೆಂಕಟೇಶ ಮಲಘಾಣ
ಮಹಾಲಿಂಗಪುರ: ರೋಗಿಗಳ ಸೇವೆ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಕಾರ್ಯ. ವೈದ್ಯಕೀಯ ರಂಗದಲ್ಲಿ ರೋಗಿಗಳ ಆರೈಕೆ ಮಾಡುವ ನರ್ಸ್‌ಗಳ ಸೇವೆಗೆ ಬೆಲೆ ಕಟ್ಟಲಾಗದು. ಅವರು ಮಾಡುವ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಮುಧೋಳ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ಹೇಳಿದರು. ನಗರದ ದಿ.ಡಾ.ವಿ.ಪಿ. ಕನಕರೆಡ್ಡಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ ಕಾಲೇಜಿನಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ದೀಪ ಬೆಳಗಿಸುವ ಹಾಗೂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಪಂ ಅಧ್ಯಕ್ಷೆಯ ಪುತ್ರ, ಸದಸ್ಯನ ಮಧ್ಯೆ ಮಾರಾಮಾರಿ
ಹುನಗುಂದ: ರಾಜಕೀಯ ವೈಷಮ್ಯದ ಹಿನ್ನೆಲೆ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪುತ್ರ ಹಾಗೂ ಗ್ರಾಪಂ ಸದಸ್ಯನ ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಮೂವರು ಗಾಯಗೊಂಡ ಘಟನೆ ತಾಲೂಕಿನ ಧನ್ನೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಪಂ ಸದಸ್ಯ ಸುರೇಶ್ ತಳವಾರ, ಸುನಂದಾ ತಳವಾರ, ಸಂಜೀವ್ ತಳವಾರ ಗಾಯಗೊಂಡವರು. ಹುನಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗೀತ ವಿದ್ಯೆಗೆ ಪರಿಶ್ರಮ ಅವಶ್ಯ:ಬರಗುಂಡಿ
ಗುಳೇದಗುಡ್ಡ: ಸಂಗೀತ ಕಲೆಯಲ್ಲಿ ಸಾಧನೆ ಮಾಡುವುದು ಸುಲಭವಲ್ಲ. ಶ್ರದ್ಧೆ, ಆಸಕ್ತಿ, ನಿರಂತರ ಪರಿಶ್ರಮದಿಂದ ಸಾಧನೆ ಮಾಡಿದರೆ ಮಾತ್ರ ಸಂಗೀತ ಒಲಿಯುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಇಲ್ಲಿನ ವಿಶ್ವಾಸ ಸಂಗೀತ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದೊಂದಿಗೆ ನಡೆದ ಸಂಗೀತ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಲ್ಲಿ ಬದಲಾವಣೆ ತರುವ ನಾಟಕಗಳು: ಕಸಾಪ ಅಧ್ಯಕ್ಷ ಘಂಟಿ
ಗುಳೇದಗುಡ್ಡ: ಸಮೀಪದ ಕೋಟೆಕಲ್ ಗ್ರಾಮದ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೋಟೆಕಲ್ಲ ಸಂಯುಕ್ತಾಶ್ರಯದಲ್ಲಿ ಸಾಣೆಹಳ್ಳಿಯ ಶ್ರೀ ಶಿವಕುಮಾರ ಕಲಾ ಸಂಘದವರಿಂದ ಮೂರು ದಿನ ನಡೆದಿರುವ ನಾಟಕೋತ್ಸವ-2024ರ ಮೊದಲನೇ ದಿನ ನಾಟಕೋತ್ಸವವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಸ್. ಘಂಟಿ ಉದ್ಘಾಟಿಸಿ ಮಾತನಾಡಿ, ನಾಟಕಗಳು ನಮ್ಮ ಬದುಕಿನಲ್ಲಿ ನಿತ್ಯ ನಡೆಯುವ ಪ್ರಸಂಗಗಳನ್ನೇ ನುರಿತ ಕಲಾವಿದರಿಂದ ಮತ್ತೆ ರಂಗದ ಮೇಲೆ ಪ್ರದರ್ಶನ ಮಾಡುವುದರಿಂದ ನೋಡುಗರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು.
ಗೋಲಭಾವಿಯಲ್ಲಿ ಸಂವಿಧಾನ ಜಾಗೃತಿ ಜಾಥಾ
ರಬಕವಿ-ಬನಹಟ್ಟಿ: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತಿ ಬಾಗಲಕೋಟೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತಿ ರಬಕವಿ-ಬನಹಟ್ಟಿ, ಗ್ರಾಮ ಪಂಚಾಯತಿ ಗೋಲಭಾವಿ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲಾವತಿ ಲಕ್ಕಪ್ಪ ಮಾಂಗ ಜಾಥಾಗೆ ಚಾಲನೆ ನೀಡಿದರು. ಗ್ರಾಪಂ ಸದಸ್ಯರು, ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.
ಇಳಕಲ್ಲನಲ್ಲಿ ನಾಲ್ಕು ದೇವರ ಪಲ್ಲಕ್ಕಿ ಉತ್ಸವ ಸಂಭ್ರಮ
ಇಳಕಲ್ಲ: ನಗರದಲ್ಲಿ ಫೆ.೧೪ರಂದು ನೀಲಕಂಠೇಶ್ವರ, ಹಿಂಗುಲಾಂಬಿಕಾ, ಅಂಬಾಭವಾನಿ, ಚೌಡೇಶ್ವರಿ ದೇವಿಯರ ಉತ್ಸವಗಳ ಅಂಗವಾಗಿ ನಗರದಲ್ಲಿ ನಾಲ್ಕು ದೇವರುಗಳ ಪಲ್ಲಕ್ಕಿ ಉತ್ಸವ ಅತ್ಯಂತ ಅದ್ಧೂರಿಯಾಗಿ ನಡೆದವು. ಉತ್ಸವ ನಿಮಿತ್ತ ನಗರದ ಎಲ್ಲ ದೇವಸ್ಥಾನಗಳಲ್ಲಿ ಮಹಾರುದ್ರಾಭಿಷೇಕ, ಸಹಸ್ರ ದಳ ಪತ್ರಿ ಅರ್ಪಣೆ ಹಾಗೂ ಮಹಾ ಮಂಗಳಾರತಿ, ನಂತರ ನಗರದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಭಕ್ತರಿಗೆ ಮಹಾಪ್ರಸಾದ ವಿತರಣೆ ನಡೆಯಿತು.
ನಿಶ್ಚಿತ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಯಶಸ್ಸು ಸಾಧ್ಯ: ಡಾ.ಸಂಗಮೇಶ ಸಾಲಿಮಠ
ಬಾಗಲಕೋಟೆ: ನಗರದ ವಿಶ್ವ ನೂತನ ಚಿತ್ರಕಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ನಗರದ ಶ್ರೀ ಹುಲಿಗೆಮ್ಮದೇವಿ (ಪ.ಜಾ.) ಸೇವಾ ಸಂಘದ ದ್ವಿತೀಯ ವಾರ್ಷಿಕೋತ್ಸವವನ್ನು ನೇತ್ರ ತಜ್ಞ ವೈದ್ಯ ಡಾ.ಸಂಗಮೇಶ ಸಾಲಿಮಠ ಉದ್ಘಾಟಿಸಿ ಮಾತನಾಡಿ, ಇಂದಿನ ಯುವಜನತೆ ಒಳ್ಳೆಯ ಕನಸು, ನಿಶ್ಚಿತ ಗುರಿ ಇಟ್ಟುಕೊಂಡು ಸದಾ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು. ವಿವಿಧ ಕ್ಷೇತ್ರದ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.
ಶೀಘ್ರವೇ ಘಟಪ್ರಭಾ ನದಿಗೆ 3500 ಕ್ಯೂಸೆಕ್‌ ನೀರು: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ಬಾಗಲಕೋಟೆ: ಜಿಲ್ಲೆಯ ಘಟಪ್ರಭಾ ನದಿಯ ಪಾತ್ರದಲ್ಲಿ ನೀರು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 3500 ಕ್ಯೂಸೆಕ್ ನೀರು ಬಿಡುಗಡೆಯಾಗಲಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಡಕಲ್ ಜಲಾಶಯದಿಂದ ಫೆ.19ರಂದು ನೀರು ಬಿಡುಗಡೆ ಮಾಡುವುದಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ. ನೀರು ಬಿಡುಗಡೆಯಾದಾಗ ಯಾವುದೇ ಕಾರಣಕ್ಕೂ ನದಿ ಪಾತ್ರದಲ್ಲಿ ಜಮೀನುಗಳಿಗೆ ನೀರು ಬಳಸಿಕೊಳ್ಳುವಂತಿಲ್ಲ ಎಂದು ತಿಳಿಸಿದ್ದಾರೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved