ಮಡಿವಾಳ ಸಮುದಾಯ ಮುಖ್ಯ ವಾಹಿನಿಗೆ ಬರಲಿ: ವೀಣಾ ಕಾಶಪ್ಪನವರಮಹಾಲಿಂಗಪುರ: ರಾಜ್ಯದ ಸಣ್ಣ ಸಣ್ಣ ಸಮುದಾಯಗಳಲ್ಲಿ ಮಡಿವಾಳ ಸಮುದಾಯವು ಒಂದು ಈ ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಆಗಲೇ ಸಮುದಾಯ ಗುರುತಿಸಲು ಸಾಧ್ಯವಾಗುತ್ತದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.ನಗರದ ಕಲ್ಪಾಡ್ ಹತ್ತಿರವಿರುವ ದೋಬಿ ಘಾಟ್ ದ್ವಾರ ಬಾಗಿಲು ಉದ್ಘಾಟಿಸಿ ಮಾತನಾಡಿ, 12ನೇ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು.