• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರವಳಿಕೆ ತಜ್ಞರು ಉತ್ತಮ ಆಡಳಿತಗಾರರಾಗಬೇಕು: ಡಾ.ಪಿ.ಎಫ್. ಕೊಟೂರ
ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅರವಳಿಕೆ ಶಾಸ್ತ್ರ ವಿಭಾಗ ಮತ್ತು ಭಾರತೀಯ ಅರವಳಿಕೆ ಶಾಸ್ತ್ರಜ್ಞರ ಸಂಘದ ಕರ್ನಾಟಕ ರಾಜ್ಯ ಶಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಎರಡು ದಿನಗಳ ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಪರೀಕ್ಷೆ ಸಂಬಂಧಿತ ಕಾರ್ಯಾಗಾರವನ್ನು ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಭಾರತೀಯ ಅರವಳಿಕೆ ಶಾಸ್ತ್ರಜ್ಞರ ಸಂಘದ ಮಾಜಿ ಅಧ್ಯಕ್ಷ ಮತ್ತು ವಿಶ್ರಾಂತ ಕುಲಪತಿ ಡಾ.ಪಿ.ಎಫ್. ಕೊಟೂರ ಮಾತನಾಡಿ, ವೈದ್ಯಕೀಯ ಕ್ಷೇತ್ರದ ಶಸ್ತ್ರಚಿಕಿತ್ಸೆಯಲ್ಲಿ ಅರವಳಿಕೆ ತಜ್ಞರ ಪಾತ್ರ ಮುಖ್ಯವಾಗಿದ್ದು, ಅವರು ವಿಷಯ ಪರಿಣತಿಯ ಜೊತೆಗೆ ಉತ್ತಮ ಆಡಳಿತಗಾರರಾಗಿಯೂ ಕಾರ್ಯ ನಿರ್ವಹಿಸಬೇಕಿದೆ ಎಂದರು.
ವೈಭವದಿಂದ ಜರುಗಿದ ಜೋಡು ರಥೋತ್ಸವ
ಕೆರೂರ: ಸಮೀಪದ ಅನವಾಲ ಗ್ರಾಮದಲ್ಲಿ ಅನ್ನಬ್ರಹ್ಮನೆಂದು ಜನಮಾನಸದಲ್ಲಿ ವಿರಾಜ ಮಾನರಾದ ಸದ್ಗುರು ಶ್ರದ್ಧಾನಂದರ ಜೋಡಿ ರಥೋತ್ಸವ ಶುಕ್ರವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಭಕ್ತರ ಜಯಕಾರದೊಂದಿಗೆ ವೈಭವದಿಂದ ಜರುಗಿತು. ಬೆಳಗ್ಗೆ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಸಂತ ಮಹಾಂತರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ, ಪ್ರವಚನಗಳು ನಡೆದವು.
ಮಹಾಲಿಂಗಪುರದಲ್ಲಿ ಶಿವಶಿಂಪಿ ಸಮಾಜದ ಜಿಲ್ಲಾ ಸಮಾವೇಶ
ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲಾ ಶಿವಶಿಂಪಿ ಸಮಾಜದ ಸಮಾವೇಶ ಹಾಗೂ ಶಿವದಾಸಿಮಯ್ಯನವರ ಜಯಂತ್ಯುವ ಬರುವ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬೆಲ್ಲದ ನಗರಿ ಮಹಾಲಿಂಗಪುರದಲ್ಲಿ ನಡೆಸಲಾಗುವುದೆಂದು ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕೋಲಾರ ಹೇಳಿದರು. ರಬಕವಿಯ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಜಿಲ್ಲೆ ಪ್ರತಿ ಪಟ್ಟಣದಲ್ಲಿ ಸರದಿಯಂತೆ ಜಿಲ್ಲಾ ಸಮಾವೇಶ ಏರ್ಪಡಿಸಲಾಗುತ್ತಿದೆ ಎಂದರು.
ಭಕ್ತಿ ಇದ್ದಲ್ಲಿ ಭಗವಂತ, ಭಗವಂತನಿದ್ದಲ್ಲಿ ನೆಮ್ಮದಿ: ಗಂಗಾಧರ ಶಿವಾಚಾರ್ಯರು
ಕಲಾದಗಿ: ಉದಗಟ್ಟಿ ಗ್ರಾಮದಲ್ಲಿ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಮಹಾಪುರಾಣ ಮಂಗಲ ಧರ್ಮ ಸಮಾರಂಭ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಮಹಾತಪಸ್ವಿ ಶ್ರೀ ಗುರುಲಿಂಗೇಶ್ವರ ಮಹಾಶಿವಯೋಗಿಗಳ ಮಹಾಪುರಾಣ ಪ್ರವಚನ ಪ್ರಾರಂಭೊತ್ಸವ ಕಾರ್ಯಕ್ರಮ ನಡೆಯಿತು.ಕಲಾದಗಿಯ ಶ್ರೀ ಗುರುಲಿಂಗೇಶ್ವರ ಸಂಸ್ಥಾನ ಪಂಚಗ್ರಹ ಹಿರೇಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಎಲ್ಲಿ ಭಕ್ತಿ ಇರುತ್ತದೆ ಅಲ್ಲಿ ಭಗವಂತ,ಎಲ್ಲಿ ಭಗವಂತ ಇರುತ್ತಾನೋ ಅಲ್ಲಿ ಭಕ್ತಿ,ನೆಮ್ಮದಿ, ಸುಖ ಸಂಪತ್ತು ಐಶ್ವರ್ಯ ಇದ್ದು, ಭಕ್ತಿ ಇರುವೆಡೆ ಗುರು, ಭಗವಂತನ ಆಗಮವಾಗಿ ಕಷ್ಟ, ನಷ್ಟ, ದೂರವಾಗುತ್ತವೆ ಎಂದು ಹೇಳಿದರು.
ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಿ: ಗಾಯಕವಾಡ
ಮಹಾಲಿಂಗಪುರ: ಪಟ್ಟಣದ ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತ್ಯುತ್ಸವ ಆಚರಿಸಲಾಯಿತು. ಹಿಂದು ಸಂಘಟನೆ ಮುಖಂಡ ನಂದು ಗಾಯಕವಾಡ ಮಾತನಾಡಿ, ಪ್ರತಿಯೊಬ್ಬರೂ ದೇಶಕ್ಕಾಗಿ ಸಮರ್ಪಣೆ ಮನೋಭಾವದಿಂದ ವ್ಯಕ್ತಿ ಜತೆ ಸುಭದ್ರ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು. ಸ್ವಾಮಿ ವಿವೇಕಾನಂದ ಹಾಗೂ ಸುಭಾಸ್ ಚಂದ್ರ ಬೋಸ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಲಾಯಿತು.
೧೪ರಂದು ಗಾಯತ್ರಿದೇವಿ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ.
ತೇರದಾಳ: ಪಟ್ಟಣದ ವೇದಮಾತೆ ಗಾಯತ್ರಿದೇವಿ ದೇವಸ್ಥಾನದ ಆವರಣದಲ್ಲಿ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಆಶ್ರಯದಲ್ಲಿ ಮಾಘ ಶುದ್ಧ ಪಂಚಮಿಯಂದು ಫೆ.೧೪ರಂದು ವೇದಮಾತೆ ಗಾಯತ್ರಿದೇವಿ ಮೂರ್ತಿ ಪ್ರತಿಷ್ಠಾಪನೆಯ ೧೧ನೇ ವಾರ್ಷಿಕೋತ್ಸವ ನಿಮಿತ್ತ ರಬಕವಿಯ ಶೇಖರಾಚಾರ್ಯರರ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಅಧ್ಯಕ್ಷ ಸಂಜೀವ ಕಲೇಗಾರ ತಿಳಿಸಿದ್ದಾರೆ.
ವಕೀಲರಿಗೆ ಇಂಗ್ಲಿಷ್ ಭಾಷೆ ಬರಲ್ಲ ಎಂಬ ಕೀಳರಿಮೆ ಬೇಡ: ನ್ಯಾ.ಸಚಿನ್ ಶಂಕರ ಮಗದುಮ್ಮ
ರಬಕವಿ-ಬನಹಟ್ಟಿ: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಬೆಂಗಳೂರು ಮತ್ತು ವಕೀಲರ ಸಂಘ ರಬಕವಿ-ಬನಹಟ್ಟಿ ಜಂಟಿಯಾಗಿ ಶನಿವಾರ ಆಯೋಜಿಸಿದ್ದ ಯುವ ವಕೀಲರಿಗೆ ತಾಲೂಕು ಮಟ್ಟದ ೩ ದಿನಗಳ ಕಾನೂನು ಕಾರ್ಯಾಗಾರ ಉದ್ಘಾಟಿಸಲಾಯಿತು. ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ಉಸ್ತುವಾರಿ ನ್ಯಾಯಮೂರ್ತಿ ಸಚೀನ್ ಶಂಕರ ಮಗದುಮ್ಮ ಮಾತನಾಡಿ, ವಕೀಲರಿಗೆ ಇಂಗ್ಲಿಷ್‌ ಭಾಷೆಯಲ್ಲಿ ವ್ಯವಹರಿಸುವಾಗ ಮತ್ತು ನ್ಯಾಯಾಲಯದಲ್ಲಿ ವಿಷಯ ಮಂಡಿಸುವಾಗ ಯಾವುದೇ ಕೀಳರಿಮೆ ಇರಬಾರದು. ಭಾಷೆ ಸಂವಹನ ಮಾಧ್ಯಮವಾಗಿದ್ದು, ಇಂಗ್ಲಿಷ್ ಭಾಷೆಯ ಸತತ ಅಧ್ಯಯನ ಮತ್ತು ಕಾನೂನು ಪರಿಭಾಷೆಗಳ ಸಮರ್ಥ ಬಳಕೆಯಿಂದ ವಕೀಲರು ಆತ್ಮವಿಶ್ವಾಸದಿಂದ ವಿಷಯ ಮಂಡನೆ ಮಾಡಬೇಕೆಂದರು.
ತೋವಿವಿ ಸಂಶೋಧನೆ, ವಿಸ್ತರಣೆಗೂ ಒತ್ತು ನೀಡಲಿ: ಶಾಸಕ ಜೆ.ಟಿ.ಪಾಟೀಲ
ಬಾಗಲಕೋಟೆ: ನಗರದ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬರ ಸಹಿಷ್ಣುತೆಗಾಗಿ ತೋಟಗಾರಿಕೆ ಎಂಬ ಧ್ಯೇಯ ವಾಕ್ಯದೊಂದಿಗೆ ತೋವಿವಿಯ ಮುಖ್ಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿರುವ ತೋಟಗಾರಿಕೆ ಮೇಳ-2024ನ್ನು ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಜೆ.ಟಿ.ಪಾಟೀಲ ಸಸಿಗಳಿಗೆ ನೀರೆರೆಯುವುದರ ಮೂಲಕ ಚಾಲನೆ ನೀಡಿದರು. ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಹಿತ್ಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಗುಳೇದಗುಡ್ಡ: ತಾಲೂಕಿನ ಕಟಗೇರಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಬಾಗಲಕೋಟೆ ಹಾಗೂ ತಾಲೂಕು ಘಟಕ ಗುಳೇದಗುಡ್ಡ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತು. ಅಧ್ಯಕ್ಷತೆ ವಹಿಸಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿ, ಸಾಹಿತಿಗಳು ಸ್ಥಳ ಗುರುತಿಸಿ ಸಾಹಿತ್ಯ ಭವನ ಕಟ್ಟಡ ನಿರ್ಮಿಸಿಕೊಂಡು ಸಾಹಿತ್ಯ ಚಟುವಟಿಕೆ ಮೂಲಕ ಸಾಹಿತ್ಯ ಕ್ಷೇತ್ರವನ್ನು ಇನ್ನಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಶ್ರಮಿಸಬೇಕು ಎಂದರು.
ಜೀತ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ: ನ್ಯಾ.ಎನ್.ವಿ. ವಿಜಯ
ಬಾಗಲಕೋಟೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ, ಇಂದಿಗೂ ಕೂಡ ವಿವಿಧ ರೀತಿಯ ಜೀತ ಪದ್ಧತಿ ಕಾಣಬಹುದಾಗಿದ್ದು, ಜನರ ಸಹಕಾರ ನೀಡಿದಲ್ಲಿ ಜೀತ ಪದ್ಧತಿ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಉದ್ಘಾಟಿಸಿದರು.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved