• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಸಂಸ್ಕಾರಯುತ ಪರಾಕ್ರಮ, ದೇಶಪ್ರೇಮ ಬಿತ್ತಬೇಕು: ಡಾ.ಎ.ಆರ್. ಬೆಳಗಲಿ
ಮಹಾಲಿಂಗಪುರ: ಶಿಕ್ಷಣ ಹುಲಿಯ ಹಾಲಿದ್ದಂತೆ ಕುಡಿದವನು ಘರ್ಜಿಸಲೇಬೇಕು ಎಂಬ ವಾಣಿಯಂತೆ ಶಿಕ್ಷಣ ಸಂಸ್ಕಾರಯುತ ಪರಾಕ್ರಮ ಮತ್ತು ದೇಶಪ್ರೇಮ ಬಿತ್ತಬೇಕು. ಆ ಮೂಲಕ ಪ್ರತಿ ಮಗುನ್ನೂ ಶ್ರೇಷ್ಠ ನಾಯಕನನ್ನಾಗಿ ರೂಪಿಸಬೇಕು ಎಂದು ಖ್ಯಾತ ವೈದ್ಯ ಡಾ.ಎ.ಆರ್. ಬೆಳಗಲಿ ಹೇಳಿದರು. ಸ್ಥಳೀಯ ಬನಶಂಕರಿ ವಿದ್ಯಾವರ್ಧಕ ಸಂಘದ ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯ 32 ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲ: ಶಾಸಕ ಚಿಮ್ಮನಕಟ್ಟಿ
ಬಾದಾಮಿ: ಕರೋನಾ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ಎರಡು ಮೂರು ವರ್ಷಗಳಿಂದ ಜಾನುವಾರು ಜಾತ್ರೆ ನಡೆದಿರಲಿಲ್ಲ. ಈ ಬಾರಿ ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ನಗರದ ಹೊರವಲಯದ ಎಪಿಎಂಸಿ ಆವರಣದಲ್ಲಿ ನಡೆದ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾನುವಾರು ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ದಾರಿ: ಶಾಸಕ ಚಿಮ್ಮನಕಟ್ಟಿ
ಗುಳೇದಗುಡ್ಡ: ಮಕ್ಕಳ ಆದರ್ಶ ಹಾಗೂ ಸಂಸ್ಕಾರಯುತ ಭವಿಷ್ಯ ನಿರ್ಮಾಣಕ್ಕೆ ಶಿಕ್ಷಣವೇ ದಾರಿಯಾಗಿದೆ. ಸರ್ಕಾರಿ ಶಾಲೆಯಲ್ಲಿ ಕಲಿತ ಅನೇಕರು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಸಮೀಪದ ಪಾದನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ಕೆಮಿಕಲ್ ಫರ್ಟಿಲೈಜರ್ ಕಂಪನಿ ಸಿ.ಎಸ್.ಆರ್.ಯೋಜನೆ ಅಡಿಯಲ್ಲಿ ಅಂದಾಜು ₹ 3.50ಲಕ್ಷ ವೆಚ್ಚದ ಶಾಲಾ ಬೆಂಚು, ಮೇಜು, ಕುರ್ಚಿ, ಗಾಡ್ರೇಜ್, ಕಪಾಟು, ಗ್ರೀನ್ ಬೋರ್ಡ್‌, ಊಟದ ತಟ್ಟೆ ಹೀಗೆ ಹಲವು ಕಲಿಕಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶ್ವ ಕ್ಯಾನ್ಸರ್ ದಿನಾಚರಣೆ ಜಾಗೃತಿ ಜಾಥಾಗೆ ಶಾಸಕ ಎಚ್.ವೈ.ಮೇಟಿ ಚಾಲನೆ
ಬಾಗಲಕೋಟೆ: ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಆರೈಕೆಯ ಅಂತರ ಕಡಿತಗೊಳಿಸಿ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡ ಕ್ಯಾನ್ಸರ್ ಕುರಿತ ಅರಿವು ಮತ್ತು ಜಾಗೃತಿ ಜಾಥಾಗೆ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಸೋಮವಾರ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ. ಕೋಶ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಕರ್ತವ್ಯ ಪಾಲನೆ ಸಂವಿಧಾನ ಗೌರವಿಸಿದಂತೆ: ನಂದಾ ಹನಮರಟ್ಟಿ
ಕಲಾದಗಿ: ಸಂವಿಧಾನದಲ್ಲಿ ದೇಶದ ಪ್ರಜೆಗಳಿಗೆ ವಿವಿಧ ಹಕ್ಕು ನೀಡಲಾಗಿದೆ, ಅವುಗಳನ್ನು ಪಡೆಯುವಂತೆ ಸಂವಿಧಾನದಲ್ಲಿ ನೀಡಲಾದ ಕರ್ತವ್ಯ ಸಾಲಿಸುವುದು ಸಹ ನಮ್ಮ ಕರ್ತವ್ಯವಾಗಿದೆ. ಚಿಕ್ಕ ಚಿಕ್ಕ ಕರ್ತವ್ಯಗಳನ್ನು ಪಾಲಿಸುವುದೂ ಸಹ ಸಂವಿಧಾನ ಗೌರವಿಸಿದಂತೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹನಮರಟ್ಟಿ ಹೇಳಿದರು. ಖಜ್ಜಿಡೋಣಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ, ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಯುಧವನ್ನು ಹಿಡಿದು ಹೋರಾಡುವವರನ್ನು ಸೋಲಿಸಬಹುದು. ಆದರೆ ಪುಸ್ತಕವನ್ನು ಹಿಡಿದು ಹೋರಾಡುವವರನ್ನು ಸೋಲಿಸಲಾಗದು.
ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಚಿಮ್ಮನಕಟ್ಟಿ
ಗುಳೇದಗುಡ್ಡ: ತಾಲೂಕು ಸರ್ಕಾರಿ ನೌಕರರ ಸಂಘ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕು ಸಂಘಕ್ಕೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜತೆಗೆ ನೌಕರರ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಲ್ಲಿ ಅನುದಾನ ಒದಗಿಸುವುದಾಗಿ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರವಸೆ ನೀಡಿದರು. ಪಟ್ಟಣದ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಯೋಜಿಸಿದ್ದ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ, ಸಾಧಕರು, ನಿವೃತ್ತ ನೌಕರರು ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನ್ನಿಕಟ್ಟಿಯಲ್ಲಿ ನರೇಗೋತ್ಸವ ಕಾರ್ಯಕ್ರಮ
ಬಾಗಲಕೋಟೆ: ತಾಲೂಕು ಬೆನಕಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಮನ್ನಿಕಟ್ಟಿ ಗ್ರಾಮದ ಅಮೃತ ಸರೋವರ ದಡದಲ್ಲಿ ನರೇಗೋತ್ಸವ ಕಾರ್ಯಕ್ರಮ ಜರುಗಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ, ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ಕುರಿತು ಮಾಹಿತಿ ನೀಡಿದರು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಸಹ ಜರುಗಿತು. ಹಾಗೂ ನರೇಗಾ ಯೋಜನೆಯಡಿಯಲ್ಲಿ ನೂರು ದಿನಗಳಲ್ಲಿ ಕೂಲಿ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.
ಉದಗಟ್ಟಿ: ಮಹಾಪುರಾಣ, ಅಡ್ಡಪಲ್ಲಕ್ಕಿ ಮಹೋತ್ಸವ
ಕಲಾದಗಿ: ಸಮೀಪದ ಉದಗಟ್ಟಿ ಗ್ರಾಮದಲ್ಲಿ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಮಹಾಪುರಾಣ ಮಂಗಲ, ಧರ್ಮ ಸಮಾರಂಭ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ಫೆ.೭ರಿಂದ ೧೭ರವರೆಗೆ ಕಲಾದಗಿಯ ಶ್ರೀ ಗುರುಲಿಂಗೇಶ್ವರ ಸಂಸ್ಥಾನ ಪಂಚಗ್ರಹ ಹಿರೇಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜರುಗಲಿವೆ.
ಯಡಹಳ್ಳಿಗೆ ತಹಸೀಲ್ದಾರ್‌ ಭೇಟಿ: ಕಾಮಗಾರಿ ಪರಿಶೀಲನೆ
ಬಾಗಲಕೋಟೆ: ತಾಲೂಕಿನ ಯಡಹಳ್ಳಿ ಗ್ರಾಮದ ಅಜಾತ ನಾಗಲಿಂಗೇಶ್ವರ ಮಠಕ್ಕೆ ಬಾಗಲಕೋಟೆ ತಹಸೀಲ್ದಾರ್ ಅಮರೇಶ ಪಮ್ಮಾರ ಶನಿವಾರ ಭೇಟಿ ನೀಡಿ ದತ್ತಿ ಇಲಾಖೆಯಡಿ ಕೈಗೊಂಡ ಕಾಮಗಾರಿ ಪರಿಶೀಲನೆ ಮಾಡಿದರು.ಶ್ರೀಮಠದಲ್ಲಿ ಇತ್ತೀಚಿಗೆ ಕೈಗೊಳ್ಳಲಾದ ಧರ್ಮದತ್ತಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮಠದ ಪೌಳಿಯ ಕಾರ್ಯ ವೀಕ್ಷಿಸಿದರು.
ವಚನಗಳ ರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಪಾತ್ರ ಹಿರಿದು:ಜಯರಾಮ ಶೆಟ್ಟಿ
ಮಹಾಲಿಂಗಪುರ: ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು, ಅರಸ ಮೇಲಲ್ಲ ಅಗಸ ಕೀಳಲ್ಲ ಎನ್ನುವ ಸಮದೃಷ್ಟಿಯಿಂದ ಎಲ್ಲರೂ ಒಂದೇ ಎಂದು ಪ್ರತಿಪಾದಿಸಿದ ಮಡಿವಾಳ ಮಾಚಿದೇವ 12ನೇ ಶತಮಾನದ ಶರಣರ ಪರಂಪರೆಯಲ್ಲಿ ಪ್ರಕಾಶಮಾನವಾಗಿ ಕಂಡವರು ಬಸವಣ್ಣನವರ ಅನುಯಾಯಿ ಶರಣ ಮಾಚಿದೇವರು. ಶರಣರಲ್ಲೇ ವೀರರಾಗಿದ್ದ ಅವರು, ವಚನಗಳನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಿದರು ಎಂದು ಹಿರಿಯ ಪತ್ರಕರ್ತ ಜಯರಾಮ ಶೆಟ್ಟಿ ಹೇಳಿದರು.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved