• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಆರೋಗ್ಯಕ್ಕೆ ಮಾರಕವಾದ ಕೋಳಿ ಮಾಂಸದ ತ್ಯಾಜ್ಯ
ಗುಳೇದಗುಡ್ಡ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಎದುರಗಡೆ ಹಳ್ಳಕ್ಕೆ ಹೊಂದಿಕೊಂಡಿರುವ ಸುಮಾರು ನಾಲ್ಕು ಎಕರೆ ಖಾಸಗಿ ಬಯಲು ಜಾಗೆಯಲ್ಲಿ ಕೋಳಿ ಮಾಂಸದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಚೆಲ್ಲಿ ಪರಿಸರ ಮಾಲಿನ್ಯ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್‌ ನಿಲ್ದಾಣದ ಅಕ್ಕಪಕ್ಕದ ಹತ್ತಾರು ಕೋಳಿಮಾಂಸ ಕಟ್ ಮಾಡಿಕೊಡುವ ಚಿಕನ್ ಸೆಂಟರ್ ಹಾಗೂ ಮಾಂಸಾಹಾರಿ ಹೋಟೆಲ್‌ ಗಳು ಕೋಳಿ ಮಾಂಸದ ತ್ಯಾಜ್ಯ ತಂದು ಹಾಕುವ ಸ್ಥಳವೇ ಈ ಬಯಲು ಜಾಗೆಯಲ್ಲಿ. ತ್ಯಾಜ್ಯ ಎಲ್ಲೆಂದರಲ್ಲಿ ಬೀಸಾಕಿದ್ದರಿಂದ ಅಕ್ಕಪಕ್ಕದ ಜನವಸತಿಗಳಿಗೆ ಜನರ ಆರೋಗ್ಯಕ್ಕೆ ಕಂಟಕ ಎದುರಾಗಿದೆ.
ಬಜೆಟ್‌ನಲ್ಲಿ ನೇಕಾರ ಅಭಿವೃದ್ದಿಗೆ ಹೆಚ್ಚು ಅನುದಾನ ನೀಡಿ: ಶಿವಲಿಂಗ ಟಿರಕಿ
ರಬಕವಿ-ಬನಹಟ್ಟಿ: ಬಜೆಟ್ ಪೂರ್ವದಲ್ಲಿ ನೇಕಾರ ಸಮುದಾಯಕ್ಕೆ ಆಗಬೇಕಿದ್ದ ವಿಷಯಗಳ ಬಗ್ಗೆ ಜವಳಿ ಸಚಿವ ಶಿವಾನಂದ ಪಾಟೀಲ ಜೊತೆಗೆ ಚರ್ಚೆ ನಡೆಸಿದ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಸದ್ಯದಲ್ಲೇ ಮಂಡನೆಯಾಗುವ ಬಜೆಟ್‌ನಲ್ಲಿ ನೇಕಾರ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ದಿ.ಇಬ್ರಾಹಿಂ ಸುತಾರ ದ್ವಿತೀಯ ಪುಣ್ಯಸ್ಮರಣೆ ನಾಳೆ
ಮಹಾಲಿಂಗಪುರ: ಕನ್ನಡದ ಕಬೀರ, ಸೂಫಿ ಸಂತ, ಪದ್ಮಶ್ರೀ ಪುರಸ್ಕೃತ ದಿ.ಇಬ್ರಾಹಿಂ ಸುತಾರ ಅವರ ದ್ವಿತೀಯ ಪುಣ್ಯಸ್ಮರಣೆ ಅಂಗವಾಗಿ ಭಾವ್ಯೆಕ್ಯ ದಿನೋತ್ಸವ, ಭಾವ್ಯೆಕ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಫೆ.5ರಂದು ಸ್ಥಳೀಯ ಶ್ರೀ ಸಿದ್ಧಾರೂಢ ಬ್ರಹ್ಮ ವಿದ್ಯಾಶ್ರಮದಲ್ಲಿ ಸಂಜೆ 4 ರಿಂದ 8-30 ಗಂಟೆಯವರೆಗೆ ಜರುಗಲಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ
ಗುಳೇದಗುಡ್ಡ: ತಾಲೂಕಿನ ಕಟಗೇರಿಯಲ್ಲಿ ಫೆ.10ರಂದು ಜರುಗುವ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಎಂ. ಹುಗ್ಗಿ ಅವರನ್ನು ಶುಕ್ರವಾರ ಕೊಂಕನಕೊಪ್ಪ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು, ಹಿರಿಯರು ಗ್ರಾಮದ ದ್ಯಾಮವ್ವ ತಾಯಿ ದೇವಸ್ಥಾನದಲ್ಲಿ ಸನ್ಮಾನ ಮಾಡಿ, ಪತ್ರ ನೀಡಿ ಅಧಿಕೃತ ಆಹ್ವಾನ ನೀಡಿದರು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಡಾ.ಎಚ್.ಎಸ್. ಘಂಟಿ ಸನ್ಮಾನಿಸಿ ಮಾತನಾಡಿದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕ: ವಿ.ಹನಮಂತಪ್ಪ
ಬಾದಾಮಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಕಾನೂನಿನ ಅರಿವು ಪಡೆದುಕೊಳ್ಳಲು ಸಾಧ್ಯವಿದೆ. ಹೀಗಾಗಿ ಮಕ್ಕಳ ರಕ್ಷಣೆಯಲ್ಲಿ ಮತ್ತು ಶಿಕ್ಷಣ ನೀಡುವಲ್ಲಿ ಪಾಲಕರ ಮತ್ತು ಸಮುದಾಯದ ಪಾತ್ರ ಬಹಳ ದೊಡ್ಡದಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ವಿ.ಹನಮಂತಪ್ಪ ಹೇಳಿದರು. ಜಿಲ್ಲಾಡಳಿತ, ತಾಪಂ, ಕಾನೂನು ಸೇವಾ ಸಮಿತಿ, ಸಾಶಿಇ ಹಾಗೂ ಸಿಡಿಪಿಒ ಇಲಾಖೆ ಸಹಯೋಗದಲ್ಲಿ ನಗರದ ಎಸ್.ಬಿ.ಎಂ. ಪದವಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಿಮಿತ್ತ ಬೇಟಿ ಬಚಾವೋ ಬೇಟಿ ಪಢಾವೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಂಟೂರ ಏತ ನೀರಾವರಿ ಯೋಜನೆಗೆ ಇಂದು ಚಾಲನೆ
ಬೀಳಗಿ: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಬೀಳಗಿ ಮತಕ್ಷೇತ್ರವೇನು ಹೊರತಾಗಿಲ್ಲ. ಹೀಗಾಗಿ ಕ್ಷೇತ್ರದಾದ್ಯಂತ ಕೊಳವೆಬಾವಿಗಳು, ಕೆರೆ, ಹಳ್ಳ, ಕೊಳ್ಳಗಳು ಬತ್ತುತ್ತಿವೆ. ಅವುಗಳಿಗೆ ಪುನರುಜ್ಜೀವನ ನೀಡಲು ಮಂಟೂರ ಏತ ನೀರಾವರಿಯಿಂದ ಘಟಪ್ರಭಾ ಎಡದಂಡೆ ಕಾಲುವೆಗಳ ಮೂಲಕ ಫೆ.4 ರಿಂದ 10 ದಿನಗಳ ಕಾಲ ನೀರು ಹರಿಸುವ ಕಾರ್ಯಕ್ಕೆ ಫೆ.4ರಂದು ಬೆಳಗ್ಗೆ 10 ಗಂಟೆಗೆ ಗಲಗಲಿ ಬ್ಯಾರೇಜ್‌ ಬಳಿ ಚಾಲನೆ ನೀಡಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಭಾಗವಹಿಸಲಿದ್ದಾರೆ ಎಂದು ಎಂದು ಶಾಸಕ ಜೆ.ಟಿ. ಪಾಟೀಲ್ ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಬಾಧಿತ ರೈತರಿಗೆ ಎಲ್ಲ ಸೌಲಭ್ಯ ಒದಗಿಸಿ: ಎನ್. ರವಿಕುಮಾರ್‌
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತ ರೈತರ ಜಮೀನಿಗೆ ಹಾಗೂ ಅವರಿಗೆ ದೊರಬೇಕಾಗಿರುವ ಎಲ್ಲ ಸೌಲಭ್ಯಗಳನ್ನು ಶೀಘ್ರವೇ ದೊರಕಿಸಿಕೊಡುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಮತ್ತು ಭೂಸ್ವಾಧೀನ ಕಚೇರಿಗೆ ಭೇಟಿ ನೀಡಿದ ಅವರು, ರೈತರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿ ರಮೇಶ ಕಳಸದ ಅವರಿಗೆ ಸೂಚಿಸಿದರು.
ಡಾ.ಅಂಬೇಡ್ಕರ್‌ರನ್ನು ಜಾತಿಗೆ ಸೀಮಿತಗೊಳಿಸದಿರಿ: ಸಂಪತ್ ಲಮಾಣಿ
ಕಲಾದಗಿ: ದೇಶದ ಇಡೀ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಇಂದು ಜೀವಂತಿಕೆ ಇದೆ ಅಂದರೆ ಅದು ಅಂಬೇಡ್ಕರ್ ಅವರು ನೀಡಿದ ಶ್ರೇಷ್ಠ ಸಂವಿಧಾನದಿಂದ, ಸರ್ವರಿಗೂ ಸಮಬಾಳು, ಸಮಪಾಲು, ಇಡೀ ಸಂವಿಧಾನದ ಆಶಯವನ್ನು ಪೂರ್ವ ಪೀಠಿಕೆಯಲ್ಲಿ ತಿಳಿಸಿದ್ದಾರೆ ಎಂದು ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಸಂಪತ್ ಲಮಾಣಿ ಹೇಳಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಾಗಲಕೋಟೆ ತಾಲೂಕಿನ ಸಂವಿಧಾನ ಜಾಗೃತಿ ಜಾಥಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರದ ಆಯ್ಕೆಗೆ ಜನರಿಗೆ ಮತಾಧಿಕಾರಿ ನೀಡಲಾಗಿದೆ.
ಗ್ರಾಹಕರು ಸಾಲದ ಸೌಲಭ್ಯ ಪಡೆದುಕೊಳ್ಳಿ: ಶಂಭುಕುಮಾರ
ಬಾದಾಮಿ: ಎಸ್.ಬಿ.ಐ ಬ್ಯಾಂಕಿನಿಂದ ವಿವಿಧ ರೀತಿಯ ಸಾಲಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳಿದ್ದು, ಗ್ರಾಹಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಸ್.ಬಿ.ಐ. ವ್ಯವಸ್ಥಾಪಕ ಶಂಭುಕುಮಾರ ಸಾಹು ಮನವಿ ಮಾಡಿದರು. ಶನಿವಾರ ನಗರದ ರಾಮದುರ್ಗ ರಸ್ತೆಯ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್.ಬಿ.ಐ) ಬ್ಯಾಂಕ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸಾಲ ಮೇಳ ಉದ್ದೇಶಿಸಿ ಮಾತನಾಡಿದರು.
ಅಡ್ವಾಣಿಯವರಿಗೆ ಭಾರತ ರತ್ನ ಕೊಟ್ಟಿದ್ದರಲ್ಲಿ ತಪ್ಪಿಲ್ಲ: ಸಚಿವ ಆರ್‌.ಬಿ. ತಿಮ್ಮಾಪುರ
ಬಾಗಲಕೋಟೆ: ಅಡ್ವಾಣಿ ಅವರು ಹಿರಿಯ ನಾಯಕ, ಭಾರತ ರತ್ನ ಕೊಟ್ಟಿದ್ದರಲ್ಲಿ ಏನೂ ತಪ್ಪಿಲ್ಲ, ಎಲೆಕ್ಷನ್ ಸಮಯದಲ್ಲಿ ಇಂತವೆಲ್ಲಾ ಮಾಡುತ್ತಾರೆ. ಅವರು(ಬಿಜೆಪಿ) ಏನೋ ಪರಿಗಣಿಸಿ ಕೊಟ್ಟಿರುತ್ತಾರೆ. ಅದು ನನ್ನ ಗಮನಕ್ಕೆ ಇಲ್ಲ, ನನಗೇನೂ ಗೊತ್ತಿಲ್ಲ ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಕೊಟ್ಟು ಸಮಾಧಾನ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved