ಕೃಷ್ಣಾ ಅಚ್ಚಕಟ್ಟು ಪ್ರದೇಶಗಳಿಗೆ 8ರಿಂದ ನೀರು ಬಿಡುಗಡೆಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8 ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ. ತಿಮ್ಮಾಪೂರ ತಿಳಿಸಿದರು.