• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ ನಲ್ಲಿ ಮುಧೋಳ ನಗರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಪೌರಾಯುಕ್ತ ಗೋಪಾಲ ಕಾಸೆ
ಮುಧೋಳ: ನಗರದ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯವಿರುವ ಅನುದಾನವನ್ನು ಹಾಗೂ ತಾವು ನೀಡಿದ ಸಲಹೆಯಂತೆ ಬಜೆಟ್‌ನಲ್ಲಿ ಕಾಯ್ದಿರಿಸುವುದಾಗಿ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಭರಸವೆ ನೀಡಿದರು. ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರ ಅನುಮೋದನೆಯಂತೆ ಮಂಗಳವಾರ ಮುಧೋಳ ನಗರಸಭೆಯ 2024-25ನೇ ಸಾಲಿನ ಅಂದಾಜು ಆಯವ್ಯಯ ಪತ್ರಿಕೆ (ಬಜೆಟ್) ತಯಾರಿಕೆಯ ಎರಡನೇ ಸುತ್ತಿನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕೊಡಿ: ಸಿದ್ದು ಕೊಣ್ಣೂರ
ಮಹಾಲಿಂಗಪುರ: ಇಂದಿನ ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣಗೊಂಡು ಮೌಲ್ಯಾಧಾರಿತ ಶಿಕ್ಷಣ ಎಂಬುದು ಅರ್ಥ ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳನ್ನು ಸತ್ಪ್ರಜೆಳಾಗಿ ರೂಪಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು. ಬನಶಂಕರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜ್ಞಾನ ಜ್ಯೋತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 26ನೇ ವಾರ್ಷಿಕ ಸ್ನೇಹ ಸಮೇಳನದ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ,ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡುವುದರ ಜೊತೆಗೆ ಉತ್ತಮ ಬದುಕು ನಡೆಸುವುದನ್ನು ಕಲಿಸುವುದು ಮುಖ್ಯ ಎಂದರು.
ಹೊಲಿಗೆ ತರಬೇತಿ ಪಡೆದು ಸ್ವಾವಲಂಬನೆ ಬದುಕಿ ಸಾಗಿಸಿ: ಚಿದಾನಂದ ಪಡದಪ್ಪನವರ
ಲೋಕಾಪುರ: ಗ್ರಾಮೀಣ ಭಾಗದ ಮಹಿಳೆಯರು ಹೊಲಿಗೆ ತರಬೇತಿ ಪಡೆದು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಸೌಥ್‌ ಆ್ಯಂಡ್‌ ವೆಸ್ಟ್ ಮೈನ್ಸ್ (ಮುದ್ದಾಪುರ) ಅವರು ಅವಕಾಶ ನೀಡಿದ್ದು ಇದರ ಸದುಪಯೋಗ ಪಡೆಯುವಂತೆ ಪ್ರಧಾನ ವ್ಯವಸ್ಥಾಪಕ ಚಿದಾನಂದ ಪಡದಪ್ಪನವರ ಹೇಳಿದರು. ಪಟ್ಟಣದ ಲೋಕೇಶ್ವರ ಶಿಕ್ಷಣ ಸಮಿತಿಯ ಆರ್.ಬಿ.ಜಿ. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ೧೫ ಹೊಲಿಗೆ ಯಂತ್ರಗಳನ್ನು ದೇಣಿಗೆಯಾಗಿ ನೀಡಿ ಮಾತನಾಡಿದ ಅವರು, ಇದರಿಂದ ಮಹಿಳೆಯರು ಬಿಡುವಿನ ಸಮಯದಲ್ಲಿ ಸ್ವಲ್ಪ ಹಣ ಸಂಪಾದನೆ ಮಾಡಿಕೊಳ್ಳಬಹುದೆಂದು ಸಂತಸ ವ್ಯಕ್ತಪಡಿಸಿದರು.
ಟ್ರ್ಯಾಕ್ಟರ್ ಹಾಯ್ದು ವಿದ್ಯಾರ್ಥಿನಿ ಸಾವು
ರಬಕವಿ-ಬನಹಟ್ಟಿ: ಮನೆಯಿಂದ ಸೈಕಲ್‌ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಟ್ರ್ಯಾಕ್ಟರ್ ಹಾಯ್ದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾದ ಮಾರ್ಗಮಧ್ಯೆ ಮೃತಪಟ್ಟ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಟ್ಟಿಯಲ್ಲಿ ಮಂಗಳವಾರ ನಡೆದಿದೆ. ಯಲ್ಲಟ್ಟಿ ಗ್ರಾಮದ ವಿದ್ಯಾರ್ಥಿನಿ ಸಂಸ್ಕೃತಿ ಭಜಂತ್ರಿ (೧೩) ಮೃತ ಬಾಲಕಿ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಧನೆಗೆ ಗುರಿ ಪ್ರಾಮಾಣಿಕ ಪ್ರಯತ್ನ ಬೇಕು: ಚಿತ್ರನಟ ಶ್ರೀನಗರ ಕಿಟ್ಟಿ
ಮುಧೋಳ: ಜೀವನದಲ್ಲಿ ಏನಾದರೊಂದು ಸಾಧನೆ ಮಾಡಬೇಕಾದರೆ ಒಳ್ಳೆಯ ಗುರಿ, ಉದ್ದೇಶ, ಪ್ರಾಮಾಣಿಕ ಪ್ರಯತ್ನ ಬೇಕು. ಅಂದಾಗ ಮಾತ್ರ ನಾವು ಅಂದಕೊಂಡಿರುವುದನ್ನು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಡಾ.ಟಿ.ವಿ. ಅರಳಕಟ್ಟಿ ಅವರು ಸಾಧನೆ ಇತರರಿಗೆ ಮಾದರಿಯಾಗಿದೆ ಎಂದು ಚಿತ್ರನಟ, ಬೆಂಗಳೂರಿನ ಪ್ರಾರ್ಥನಾ ಸ್ಕೂಲ್ ನಿರ್ದೇಶಕ ಶ್ರೀನಗರ ಕಿಟ್ಟಿ ಹೇಳಿದರು. ಸ್ಥಳೀಯ ಅರಳಿಕಟ್ಟಿ ಫೌಂಡೇಶನ್ ಮುಧೋಳ ರಾಯಲ್ ಸ್ಕೂಲ್ ಆವರಣದಲ್ಲಿ ಶನಿವಾರ ಸಂಜೆ ಮುಧೋಳ ರಾಯಲ್ ಸ್ಕೂಲ್ ಅವಿಷ್ಕಾರ -3ರ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾ ಟಿಸಿ ಮಾತನಾಡಿದರು.
ಮೌಢ್ಯ, ಅಂಧ ಶ್ರದ್ಧೆಗಳ ದಾಸರಾಗಬೇಡಿ: ಡಾ.ಟಿ.ಬಿ. ಅಳ್ಳೊಳ್ಳಿ
ಬಾಗಲಕೋಟೆ: ವಿದ್ಯಾರ್ಥಿಗಳು ಮೌಢ್ಯ ಹಾಗೂ ಅಂಧ ಶ್ರದ್ಧೆಗಳ ದಾಸರಾಗದೆ ವೈಜ್ಞಾನಿಕ ಚಿಂತನೆಗಳ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವ ಡಾ.ಟಿ.ಬಿ. ಅಳ್ಳೊಳ್ಳಿ ಹೇಳಿದರು. ತೋವಿವಿ ಆವರಣದಲ್ಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಹಿರೇಪಡಸಲಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಹಮ್ಮಿಕೊಂಡ ವೈಜ್ಞಾನಿಕ ಚಿಂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಚ್‌ಐವಿ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಿ: ಎಂ.ಎಚ್. ಸುಬೇದಾರ್
ಬಾಗಲಕೋಟೆ: ಎಚ್ಐವಿ ಸೋಂಕಿತರನ್ನು ಕೀಳಾಗಿ ಕಾಣದೆ ಅವರಿಗೆ ಆತ್ಮಸ್ಥೈರ್ಯ ತುಂಬಿ ಸಮಾಜದಲ್ಲಿ ಗೌರವಿತವಾಗಿ ಕಾಣಬೇಕು ಎಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದ ಮೆಲ್ವಿಚಾರಕ ಎಂ.ಎಚ್. ಸುಬೇದಾರ್ ಹೇಳಿದರು. ಬಿ.ವಿ.ವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ ಎನ್ನೆಸ್ಸೆಸ್‌ ಘಟಕ ಹಾಗೂ ಬಾಗಲಕೋಟೆ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣದ ಘಟಕಗಳ ಸಹಯೋಗದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾನಾಡಿದರು.
ನಮ್ಮ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ಇದು ಪ್ರಜ್ಞಾಹೀನ ವ್ಯವಸ್ಥೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ
ಬಾದಾಮಿ: ಈಗಿರುವ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾವು ಮಾಡಿದ್ದಲ್ಲ. ಬ್ರಿಟಿಷರು ಮಾಡಿದ ಶಿಕ್ಷಣ ವ್ಯವಸ್ಥೆಯನ್ನು 75 ವರ್ಷಗಳಿಂದ ಮುಂದುರಿಸಿಕೊಂಡು ಹೊರಟಿದ್ದಾರೆ ಎಂದು ಗದಗ ವಿಜಯಪೂರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಭಾನುವಾರ ವಿಶ್ವಚೇತನ ಸಂಸ್ಥೆ ವತಿಯಿಂದ ನಗರದ ಶಿವಯೋಗಮಂದಿರ ಶಾಖಾಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ನಮ್ಮ ಭವ್ಯ ಭಾರತ ಉಪನ್ಯಾಸ ನೀಡಿದರು. ಅಮೆರಿಕದವರು ಪ್ರಜ್ಞಾವಂತರಾಗುವುದಕ್ಕೆ ಮತ್ತು ಭಾರತೀಯರು ಪ್ರಜ್ಞಾಹೀನರಾಗುವುದಕ್ಕೆ ಅನೇಕ ಕಾರಣಗಳಿವೆ ಎಂದರು.
ಲಗ್ನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರ ಪ್ರಚಾರ
ರಬಕವಿ-ಬನಹಟ್ಟಿ: ಮದುವೆ ಆಮಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿಯವರ ಭಾವಚಿತ್ರ ಸಹಿತ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡಿದರೆ ನನ್ನ ಮದುವೆಗೆ ನಿಜವಾದ ಉಡುಗೊರೆ ಎಂದು ಮುದ್ರಿಸುವ ಮೂಲಕ ಮೋದಿ ಅಭಿಮಾನಿಗಳು ಸದ್ದಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ವಧುವಿನ ಕಡೆಯವರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚಿಸಿ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ. ಲಗ್ನ ಪತ್ರಿಕೆ ಮೂಲಕ ಚುನಾವಣೆ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ.
ಅನಧಿಕೃತ ಮದ್ಯ ಮಾರಾಟ ಸ್ಥಗಿತಗೊಳಿಸಲು ಮನವಿ
ಮುಧೋಳ: ತಾಲೂಕಿನಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಹೆಚ್ಚಾಗಿದ್ದು, ಕೂಡಲೇ ಸಂಪೂರ್ಣ ಸ್ಥಗಿತಗೊಳಿಸಿ ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗಾಗುತ್ತಿರುವ ತೊಂದರೆ ತಪ್ಪಿಸಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆಯವರು ಮುಧೋಳ ಅಬಕಾರಿ ಇಲಾಖೆ ನಿರೀಕ್ಷಕರಿಗೆ ಸೋಮವಾರ ಮನವಿ ಸಲ್ಲಿಸಿದರು. ಜಯ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷೆ ಶೋಭಾ ಬಂಡಿವಡ್ಡರ ಮಾತನಾಡಿ, ಗ್ರಾಮಗಳಲ್ಲಿ ಸಿಕ್ಕ ಸಿಕ್ಕ ಸ್ಥಳಗಳಲ್ಲಿ ಮತ್ತು ಕೆಲವು ಅಂಗಡಿ, ಮನೆ, ಪಾನಶಾಪ್, ಹೊಟೇಲ್ ಧಾಬಾ ಮತ್ತು ತಾಂಡಾಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಮಕ್ಕಳು ಹಾಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವಂತೆ ಒತ್ತಾಯಿಸಿದರು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved