ಸಿಎಎ, ಸಮಾನ ನಾಗರಿಕ ಸಂಹಿತೆ ಜಾರಿ ಆಗೋದು ಗ್ಯಾರಂಟಿ: ಪ್ರಮೋದ್ ಮುತಾಲಿಕ್ಬಾಗಲಕೋಟೆ: ಸಿಎಎ ಜಾರಿ ಆಗಲೇಬೇಕು, ಆಗ ವಿರೋಧ ಉಂಟಾಗಿ ಆಗಿರಲಿಲ್ಲ. ಈಗ ಕೇಂದ್ರ ಸರ್ಕಾರ ಮಾಡೇ ಮಾಡುತ್ತದೆ. ಈಗ ಆಗದಿದ್ದರೂ ಮುಂದಿನ ಚುನಾವಣೆಗಾದರೂ ಜಾರಿ ಮಾಡೇ ಮಾಡುತ್ತಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ಜೊತೆಗೆ ಸಮಾನ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಕೂಡ ಜಾರಿಯಾಗಿ, ಹಿಂದು ರಾಷ್ಟ್ರ ಘೋಷಣೆ ಕೂಡ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.