ಇಂದು ವೇಮನರ ಜಯಂತಿ, ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಅಡಿಗಲ್ಲುಬಾದಾಮಿ: ತಾಲೂಕಾಮಟ್ಟದ ಮಹಾಯೋಗಿ ವೇಮನರ 612ನೇ ಜಯಂತ್ಯುತ್ಸವ ಹಾಗೂ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಅಡಿಗಲ್ಲು ಸಮಾರಂಭ ಭಾನುವಾರ ಬೆಳಗ್ಗೆ 10.30ಕ್ಕೆ ತಾಲೂಕಿನ ಕಗಲಗೊಂಬ ಗ್ರಾಮದ ಶ್ರೀ ರಾಮಾನಂದ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಮ ವೇಮ ಚಾರಿಟಬಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಪೈಲ್ ಹಾಗೂ ಕಾರ್ಯದರ್ಶಿ ಎಸ್.ಎ.ಭರಮಗೌಡ್ರ ತಿಳಿಸಿದರು. ಶುಕ್ರವಾರ ನಗರದ ಶ್ರೀ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಸಾರಿಗೆ ಸಚಿವ ರಾಮಲಿಂಗರಡ್ಡಿ, ಕಾನೂನು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು, ಗಣ್ಣು ಉಪಸ್ಥಿತರಿರುವರು ಎಂದು ತಿಳಿಸಿದರು.