• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುತ್ತತ್ತಿ ಶ್ರೀ ಶಿವಯೋಗೇಶ್ವರ ರಥೋತ್ಸವ
ಬಾಗಲಕೋಟೆ: ತಾಲೂಕಿನ ಮುತ್ತತ್ತಿ ಗ್ರಾಮದ ಶ್ರೀ ಶಿವಯೋಗೇಶ್ವರ ಮಠದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀಮಠದ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಂಕಲ್ಪದಿಂದ ಶ್ರೀ ಶಿವಯೋಗೇಶ್ವರರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ನೆರವೇರಿತು. ಹಿರೇಮೂರಮಟ್ಟಿ ಸದ್ಭಕ್ತರಿಂದ ಮಠದ ಮೇಲೆ ಹಾಗೂ ಚಿಕ್ಕಮೂರಮಟ್ಟಿ ಸದ್ಭಕ್ತರಿಂದ ಕಳಸದ ಮೆರವಣಿಗೆ ಚಿಕ್ಕಹೊದ್ಲೂರ/ಹಿರೇಹೊದ್ಲೂರ ಸದ್ಭಕ್ತರಿಂದ ಹಗ್ಗದ ಮೆರವಣಿಗೆ, ಜಡ್ರಾಮಕುಂಟಿ ಸದ್ಭಕ್ತರಿಂದ ಶಿವಯೋಗೇಶ್ವರ ಗೋಪುರದ ಕಳಸದ ಮೆರವಣಿಗೆ ನೆರವೇರಿತು.
ಮಕ್ಕಳಲ್ಲಿ ಚಿತ್ರಕಲೆಯ ಅಭಿರುಚಿ, ಆಸಕ್ತಿ ಬೆಳೆಸಿ: ಚಂದ್ರಕಲಾ ಸೋನಿ
ಗುಳೇದಗುಡ್ಡ: ಚಿತ್ರಕಲೆ ತುಂಬಾ ಆಸಕ್ತಿದಾಯಕ ಕ್ಷೇತ್ರವಾಗಿದೆ. ಮಕ್ಕಳಲ್ಲಿ ಚಿತ್ರಕಲೆಯ ಅಭಿರುಚಿ ಮತ್ತು ಆಸಕ್ತಿ ಬೆಳೆಸಬೇಕು. ಚಿತ್ರಕಲೆ ವ್ಯಕ್ತಿಯ ಭಾವನೆ ಅಭಿವ್ಯಕ್ತಪಡಿಸುತ್ತದೆ. ಮಾನವ ಸಂವಹನಕ್ಕಾಗಿ ಬಳಸಿದ ಭಾಷೆಯಾಗಿ ರೂಪುಗೊಂಡಿದೆ ಎಂದು ಮಹಾರಾಷ್ಟ್ರದ ಚಂದ್ರಕಲಾ ಸೋನಿ ಹೇಳಿದರು. ಶುಕ್ರವಾರ ಪಟ್ಟಣದ ಮಹೇಶ್ವರಿ ವಿದ್ಯಾ ಪ್ರಚಾರಕ ಮಂಡಳದ ಪೂರ್ವ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಯುವ ಚಿತ್ರ ಕಲಾವಿದೆ ರೂಪಾ ಅಗ್ರೋಯಾ ಅವರ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಪ್ರತಿಮೆಗೆ ಅವಮಾನ ಖಂಡಿಸಿ ಪ್ರತಿಭಟನೆ
ರಬಕವಿ-ಬನಹಟ್ಟಿ: ಡಾ.ಅಂಬೇಡ್ಕರ್ ಪ್ರತಿಮೆಗೆ ಅವಮಾನ ಖಂಡಿಸಿ ರಬಕವಿ-ಬನಹಟ್ಟಿಯಲ್ಲಿ ಅಂಬೇಡ್ಕರ್ ಸೇನೆ, ದಲಿತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಗಾಂಧಿ ವೃತ್ತದಿಂದ ಎಂ.ಎಂ. ಬಂಗ್ಲೆವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಿತು. ನಂತರ ಅಂಬೇಡ್ಕರ್ ಸೇನೆಯ ಉತ್ತರ ಪ್ರಾಂತ ಅಧ್ಯಕ್ಷ ಶಿವಲಿಂಗ ಗೊಂಬಿಗುಡ್ಡ ಮಾತನಾಡಿ, ಕಲಬುರಗಿ ನಗರದ ಕೋಟನೂರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಉಗ್ರಗಾಮಿಗಳೆಂದು ಪರಿಗಣಿಸಿ ಕಠಿಣ ಶಿಕ್ಷೆಗೆ ಗುರಿಪರಿಸಬೇಕೆಂದು ತಹಸೀಲ್ದಾರಗೆ ಮನವಿ ಸಲ್ಲಿಸಿದರು.
ಭಾರತದ್ದು ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ: ಡಾ.ಶ್ರವಣಕುಮಾರ ಕೆರೂರು
ಮುಧೋಳ: ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ. ಭಾಷಾವಾರು ಪ್ರಾಂತಗಳಾಗಿ ಹಂಚಿಹೋದ ದೇಶವನ್ನು ಒಗ್ಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಲಾಯಿತು. ನಾವೆಲ್ಲರೂ ಬಡತನ, ಭ್ರಷ್ಟಾಚಾರ ನಿರ್ಮೂಲನೆಯ ಮೂಲಕ ಸಂವಿಧಾನ ಸಾಕ್ಷಾತ್ಕಾರಗೊಳಿಸಬೇಕೆಂದು ಕಾಲೇಜಿನ ಪ್ರಾಚಾರ್ಯ ಡಾ.ಶ್ರವಣಕುಮಾರ ಕೆರೂರು ಹೇಳಿದರು. ಸ್ಥಳೀಯ ಬೀಳೂರು ಗುರುಬಸವ ಮಹಾಸ್ವಾಮೀಜಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯಲ್ಲಿ (ಬಿಜಿಎಂಐಟಿ) ಶುಕ್ರವಾರ 75ನೇ ಗಣರಾಜೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕದಾಂಪುರ ಪಿಕೆಪಿಎಸ್ ಗೆ ಅವಿರೋಧ ಆಯ್ಕೆ
ಬಾಗಲಕೋಟೆ: ತಾಲೂಕಿನ ಕದಾಂಪುರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಧ್ಯಕ್ಷರಾಗಿ ಸಿದ್ಧಯ್ಯ ಹಿರೇಮಠ, ಉಪಾದ್ಯಕ್ಷರಾಗಿ ಸುರೇಶ ಶಿರೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಿದ್ಧಯ್ಯ ಹಿರೇಮಠ, ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶ ಶಿರೂರ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆಯ ಅಧಿಕಾರಿ ಜೆ.ಎಸ್.ನಂದಿಗೌಡರ ಘೋಷಣೆ ಮಾಡಿದರು.
ಶೆಟ್ಟರ್‌ ಕಾಂಗ್ರೆಸ್‌ಗೆ ನೀಡಿದ ಕೊಡುಗೆ ಶೂನ್ಯ: ಎಸ್‌.ಜಿ. ನಂಜಯ್ಯನಮಠ
ಬಾಗಲಕೋಟೆ: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರಿಂದ ಕೊಡುಗೆ ಶೂನ್ಯ. ಅವರಿಂದ ಪಕ್ಷಕ್ಕೆ ಲಾಭವಾಗಲಿಲ್ಲ. ಬದಲಾಗಿ ಹಾನಿ ಉಂಟು ಮಾಡ ಹೋಗಿದ್ದಾರೆ. ಅವರ ಧೋರಣೆ ಖಂಡಿಸುವುದಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು. ನವನಗರದ ಪತ್ರಿಕಾಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್‌ ಯಾಕೆ ಬಿಜೆಪಿ ಬಿಟ್ಟು ಬಂದಿರಿ? ಬಿಡಲು ಏನು ತೊಂದರೆ ಆಗಿತ್ತು? ಆದರೂ ಬಿಜೆಪಿಯಲ್ಲಿ 6 ಬಾರಿ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಸಭಾಪತಿ ಆಗಿ ಕೆಲಸ ಮಾಡಿದ್ರಿ ಬಿಜೆಪಿ ಬಿಟ್ಟು ಬರುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.
ಇಂದು ಉಚಿತ ಆರೋಗ್ಯ ತಪಾಸಣೆ ಶಿಬಿರ
ಹುನಗುಂದ: ಲಿಂ.ಶ್ರೀ ಗುರುಬಸವಾರ್ಯ ಮಠ ಗುರುಗಳ 45ನೇ ಪುಣ್ಯಸ್ಮರಣೆ ಸಮಾವೇಶ ಪ್ರಯುಕ್ತ ಹುನಗುಂದದ ವಿಜಯ ಮಹಾಂತೇಶ ಪ್ರೌಢಶಾಲೆ ಸಭಾಭವನದಲ್ಲಿ ಜ.28ದಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಔಷಧ ವಿತರಣೆ ನಡೆಯಲಿದ್ದು, ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ವಿ.ಮ. ಸಂಘದ ಗೌರವ ಕಾರ್ಯದರ್ಶಿ ಡಾ, ಮಹಾಂತೇಶ ಕಡಪಟ್ಟಿ ಮನವಿ ಮಾಡಿದರು.
ಭಾರತೀಯರಿಗಿಂದು ಮಹತ್ವದ ದಿನ: ಶಾಸಕ ಕಾಶಪ್ಪನವರ
ಇಳಕಲ್ಲ: ದೇಶಕ್ಕೆ ಸ್ವಾತಂತ್ರ್ಯ ದೊರೆತು ೭೫ನೇ ಗಣ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಅತ್ಯಂತ ಮಹತ್ವದ ದಿನವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ೭೫ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಂದ ಜನರಿಗಾಗಿ ಜನರಿಗೋಸ್ಕರ ಎಂಬ ನುಡಿಯೊಂದಿಗೆ ದೇಶವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ.
26ರಿಂದ ಜಿಲ್ಲಾಧ್ಯಂತ ಸಂವಿಧಾನ ಜಾಗೃತಿ ಜಾಥಾ: ಸಚಿವ ಆರ್‌.ಬಿ.ತಿಮ್ಮಾಪುರ
ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ ಧ್ವಜಾರೋಹಣ ನೆರವೇರಿಸಿ,ಗೌರವ ವಂದನೆ ಸ್ವೀಕರಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಿದರು. ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿ 11 ಚಾಲಕ ಕಂ ನಿರ್ವಾಹಕರಿಗೆ ಸುರಕ್ಷಾ ಚಾಲಕ ಬೆಳ್ಳಿ ಪದಕ ನೀಡಿ ಗೌರವಿಸಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಮಾಹಿತಿ ಕುರಿತಾದ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಿತು.
ಬಾಗಲಕೋಟೆಯ ಮೂವರು ಶಾಸಕರಿಗೆ ಒಲಿದ ನಿಗಮ-ಮಂಡಳಿ
ಬಾಗಲಕೋಟೆ; ಲೋಕಸಭೆಯ ಚುನಾವಣೆಗೆ ಮುನ್ನ ರಾಜ್ಯ ಸರ್ಕಾರ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಮಾಡಿದ್ದು, ಜಿಲ್ಲೆಯ ಮೂವರು ಶಾಸಕರಿಗೆ ಅವಕಾಶ ನೀಡುವ ಮೂಲಕ ಸರ್ಕಾರ ಜಾಣ ನಡೆ ಪ್ರದರ್ಶಿಸಿದೆ. ಪಕ್ಷ ನಿಷ್ಠೆ, ಹಿರಿತನ ಹಾಗೂ ಸಂಘಟನಾತ್ಮಕವಾಗಿ ಬರುವ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವ ದೃಷ್ಟಿಯಲ್ಲಿ ಬಾಗಲಕೋಟೆ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಾಗಲಕೋಟೆ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ, ಬೀಳಗಿ ಶಾಸಕ ಜೆ.ಟಿ.ಪಾಟೀಲರಿಗೆ ಹಟ್ಟಿ ಚಿನ್ನದ ಗಣಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved