• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಳೇದಗುಡ್ಡದಲ್ಲಿ ಸಂಭ್ರಮದ ರಾಮೋತ್ಸವ
ಗುಳೇದಗುಡ್ಡ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮ ಸೋಮವಾರ ಪಟ್ಟಣದಲ್ಲಿ ರಾಮೋತ್ಸವ ನಿಮಿತ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭಿಷೇಕ, ಅನ್ನಸಂತರ್ಪಣೆ ನಡೆಸಲಾಯಿತು. ಪಟ್ಟಣದ ಬೀದಿಗಳಲ್ಲಿ ಕೇಸರಿ ಧ್ವಜಗಳನ್ನು ಹಾರಿಸಲಾಯಿತು. ಪಟ್ಟಣದ ಲಕ್ಷ್ಮೀ ಸಹಕಾರಿ ಬ್ಯಾಂಕಿನಲ್ಲಿ ಸೋಮವಾರ ಬೆಳಿಗ್ಗೆ ಬ್ಯಾಂಕಿನಲ್ಲಿ ಮುಂಭಾಗದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಪಟ್ಟಣದ ಕರಸೇವೆಕ ದೇವೇಂದ್ರಪ್ಪ ತಿಪ್ಪಣ್ಣ ಗಾಯದ ಅವರನ್ನು ಸನ್ಮಾನಿಸಲಾಯಿತು. ಬಳಕ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು.
ಸ್ವಂತ ಅಭಿವೃದ್ಧಿ ಜೊತೆಗೆ ದೇಶದ ಆರ್ಥಿಕತೆ ಸದೃಢಗೊಳಿಸಿ
ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ಯಾವುದೇ ಸರ್ಕಾರಗಳು ಯುವಜನತೆಗೆ ಮಾರ್ಗ ತೋರಿಸಿ ಪ್ರೋತ್ಸಾಹಿಸಿ ಅವರನ್ನು ಉದ್ಯಮಿಗಳನ್ನಾಗಿ ಮಾಡುವ ಉದ್ದೇಶ ಹೊಂದಿರಬೇಕು ಎಂದಿದ್ದಾರೆ.
ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ಸುಭಾಷ್‌ ಚಂದ್ರ ಬೋಸ್‌: ಡಾ.ಮಲ್ಲಿಕಾರ್ಜುನ ಜರಕುಂಟಿ
ಮುಧೋಳ: ನೇತಾಜಿ ಸುಭಾಷ್ ಚಂದ್ರಬೋಸ್ ಈ ಹೆಸರು ಕೇಳಿದ ತಕ್ಷಣ ದೇಶ ಪ್ರೇಮದ ಕಿಚ್ಚು ಇನ್ನಷ್ಟು ಜಾಗೃತವಾಗುತ್ತದೆ, ಸಿಡಿಲಬ್ಬರದ ಘೋಷಣೆಗಳು ನೆನಪಾಗುತ್ತವೆ. ಪ್ರಖರ ಚಿಂತನೆಗಳು ಸ್ಮೃತಿ ಪಟಲದಲ್ಲಿ ಸುಳಿದಾಡುತ್ತವೆ ಎಂದು ಡಾ.ಮಲ್ಲಿಕಾರ್ಜುನ ಜರಕುಂಟಿ ಹೇಳಿದರು. ಸ್ಥಳೀಯ ಎಸ್.ಆರ್. ಕಂಠಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಮಂಗಳವಾರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನವಹಿಸಿ ಮಾತನಾಡಿದರು.
ಮುಧೋಳದಲ್ಲಿ ಮೊಳಗಿದ ಜೈ ಶ್ರೀರಾಮ ಘೋಷಣೆ
ಮುಧೋಳ: ಅಯೋಧ್ಯೆಯಲ್ಲಿ ಅಂದಾಜು ₹ 1100 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರ ಸೋಮವಾರ ಉದ್ಘಾಟನೆಯ ನಿಮಿತ್ತ ಶ್ರೀರಾಮನ ಭಕ್ತರು ಮುಧೋಳ ನಗರದ ವಿವಿಧ ಹಿಂದು ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ, ಮಂಗಳರಾತಿ, ದೀಪೋತ್ಸವ ಮತ್ತು ಅನ್ನ ಪ್ರಸಾದದ ವ್ಯೆವಸ್ಥೆ ಮಾಡಲಾಗಿತ್ತು. ಬಿಜೆಪಿ ಯುವ ಧುರೀಣ ಅರುಣ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ನಗರದ ಅಂಗಡಿಗಳಿಗೆ ತೆರಳಿ ಸಿಹಿ ಹಂಚಿದರು.ಸಂದರ್ಭದಲ್ಲಿ ಶ್ರೀರಾಮ ಭಕ್ತರಾದ ಸೋನಾಪ್ಪಿ ಕುಲಕರ್ಣಿ, ರಾಜು ಯಡಹಳ್ಳಿ, ಸಂತೋಷ ಘೋರ್ಪಡೆ ಸೇರಿದಂತೆ ಇತರರು ಇದ್ದರು.
ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ಮಠಾಧೀಶರು ಭಾಗಿ
ಬಾಗಲಕೋಟೆ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ರಾಜ್ಯದ ಪ್ರಮುಖ ಮಠಾಧೀಶರು ಭಾಗಿಯಾಗಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ, ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದ ಮಹಾಸ್ವಾಮೀಜಿ, ಚಿತ್ರದುರ್ಗ ಮಾದರ ಚನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರು ಭಾಗಿಯಾಗಿದ್ದರು.
ಪರ್ವತಿ ಗ್ರಾಮದಲ್ಲಿ ಮಾರುತೇಶ್ವರ ದೇವಸ್ಥಾನ ಲೋಕಾರ್ಪಣೆ
ಗುಳೇದಗುಡ್ಡ: ಸಮೀಪದ ಪರ್ವತಿ ಗ್ರಾಮ ಹತ್ತಿರದಲ್ಲಿ ನೂತನ ಶ್ರೀ ಮಾರುತೇಶ್ವರ ದೇವಸ್ಥಾನದ ಲೋಕಾರ್ಪಣೆ ಹಾಗೂ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ಸಡಗರ, ಸಂಭ್ರಮದಿಂದ ಜರುಗಿತು. ಪಟ್ಟಣದಿಂದ ಪರ್ವತಿ ಗ್ರಾಮಕ್ಕೆ ತೆರಳುವ ರಸ್ತೆ ಪಕ್ಕದಲ್ಲಿ ಈ ನೂತನ ಶ್ರೀ ಮಾರುತೇಶ್ವರ ದೇವಸ್ಥಾನ ನಿರ್ಮಿಸಲಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ ಪ್ರಾಣಪ್ರತಿಷ್ಠಾನ ಸಂದರ್ಭದಲ್ಲಿಯೇ ಇಲ್ಲಿನ ಶ್ರೀ ಮಾರುತೇಶ್ವರ ದೇವಸ್ಥಾನ ಲೋಕಾರ್ಪಣೆಗೆ ಯುವಕರು ನಿರ್ಧರಿಸಿದ್ದು, ಇಂದು ಶ್ರೀರಾಮಚಂದ್ರನ ಬಲಗೈ ಬಂಟ ಹನುಮಾನ ದೇವಸ್ಥಾನ ಲೋಕಾರ್ಪಣೆ ಮಾಡಿದರು.
ಸಂವಿಧಾನ ಜಾಗೃತಿ ಜಾಥಾ ಸಂಚಾರ ಯಶಸ್ಸಿಗೆ ಸಹಕರಿಸಿ: ಜಿಪಂ ಸಿಇಒ ಕುರೇರ್‌
ಬಾಗಲಕೋಟೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಪೂರ್ವ ಸಿದ್ಧತಾ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ಶಶಿಧರ ಕುರೇರ್‌ ಮಾತನಾಡಿ, ಜ.26ರಂದು ಜಾಥಾ ವಾಹನಕ್ಕೆ ಚಾಲನೆ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಚಾಲನೆ ನೀಡಲಿದ್ದು, ಬಾಗಲಕೋಟೆ ಮತ್ತು ಜಮಖಂಡಿ ಉಪವಿಭಾಗಗಳ ಗ್ರಾಪಂಚಾಯತಿ ಮತ್ತು ನಗರ ಪ್ರದೇಶದಲ್ಲಿಯೂ ಜಾಥಾ ಸಂಚರಿಸಲಿದೆ ಎಂದರು.
65 ಸಾವಿರ ನಿವಾಸಗಳಿಗೆ ಲಾಡು ವಿತರಿಸಿದ ಶಾಸಕ ಗುಡಗುಂಟಿ
ಜಮಖಂಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾನ ರಾಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಜಮಖಂಡಿ ಕ್ಷೇತ್ರಾದ್ಯಂತ 65 ಸಾವಿರ ನಿವಾಸಗಳೀಗೆ 1.30 ಲಕ್ಷಕ್ಕೂ ಅಧಿಕ ಲಾಡುಗಳನ್ನು ಶಾಸಕ ನಾಡೋಜ ಜಗದೀಶ ಗುಡಗುಂಟಿ ವಿತರಿಸಿದರು. ನಗರದ ಹನುಮಾನ ಮಂದಿರದ ಮುಂಬಾಗದಲ್ಲಿ ಭವ್ಯ ಶ್ರೀರಾಮನ ಮೂರ್ತಿಗೆ ಪೂಜೆ ಸಲ್ಲಿಸುವುದರೊಂದಿಗೆ ಲಾಡು ವಿತರಣೆಗೆ ಚಾಲನೆ ನೀಡಿದರು. ನಂತರ ಹನುಮಾನ ದೇವಸ್ಥಾನ, ರಾಮೇಶ್ವರ ದೇವಸ್ಥಾನ, ರಾಘವೇಂದ್ರ ಮಠ, ರಾಮದಾಸ, ಬಾಲಾಜಿ ಮಂದಿರ, ಅಪ್ಪಾಸಾಬ ವಿಠ್ಠಲ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ವೃದ್ದಾಶ್ರಮಕ್ಕೆ ಭೆಟ್ಟಿ ನೀಡಿ ಸಿಹಿ ಹಂಚಿದರು. ಹಾಗೂ ಕ್ಷೇತ್ರಾದ್ಯಂತ 1.30ಲಕ್ಷಕೂ ಅಧಿಕ ಲಾಡುಗಳನ್ನು ವಿತರಿಸಿದರು.
ವಿಹಿಂಪ ನೇತೃತ್ವದಲ್ಲಿ ಶ್ರೀರಾಮ ತಾರಕ ಹೋಮ
ಬೀಳಗಿ: ಇಲ್ಲಿನ ಶ್ರೀ ರಾಮ ಜನ್ಮಭೂಮಿ ತೀಥಕ್ಷೇತ್ರ ಹಾಗೂ ವಿಶ್ವ ಹಿಂದು ಪರಿಷತ್‌ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮಮಂದಿರ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದ ಶಿವಾಜಿ ವೃತ್ತದಲ್ಲಿ ಇರುವ ಬಸವೇಶ್ವರ ದೇವಸ್ಥಾನದಲ್ಲಿ ಪ್ರಭು ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಶ್ರೀ ರಾಮ ನಾಮತಾರಕ ಹೋಮ ಮತ್ತು ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮದ ನೇರ ಪ್ರಸಾರ ಮತ್ತು ಅನ್ನ ಸಂತರ್ಪಣೆ ಜರುಗಿತು. ಶ್ರೀರಾಮ ತಾರಕ ಹೋಮದಲ್ಲಿ ಪಟ್ಟಣದ ದಂಪತಿ ಭಾಗಿಯಾಗಿದ್ದರು. ಪಟ್ಟಣದ ಕಂಬಾರ ಅಗಸಿಯಲ್ಲಿರುವ ಮರಗಮ್ನ ದೇವಿ ದೇವಾಲಯದಲ್ಲಿ ಕಂಬಾರ ಓಣಿಯ ಹಿರಿಯರು-ಯುವಕರು ರಾಮ ಲಲ್ಲಾ ಪ್ರಾಣ ಪ್ರತಿಷ್ಠಾನದ ಸಂಭ್ರಮಾಚರಣೆ ಮಾಡಿ ಆಗಮಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿದರು.
ಡಾ.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ಶ್ರೀರಾಮೋತ್ಸವ ಸಂಭ್ರಮ
ಬಾಗಲಕೋಟೆ: ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ಪ್ರಯುಕ್ತ ಸೋಮವಾರ ಮುಂಜಾನೆ 9.30ಕ್ಕೆ ಮೆಡಿಕಲ್ ಕಾಲೇಜಿನ ಮುಖ್ಯದ್ವಾರದಲ್ಲಿ ನಿರ್ಮಿಸಲಾದ ಮಹಾಪ್ರಭು ಶ್ರೀರಾಮಲಲ್ಲಾ ಮಂಟಪದಲ್ಲಿ ಶ್ರೀರಾಮಲಲ್ಲಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಸಂಘದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved