• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಮಿ ವಿವೇಕಾನಂದ ಆದರ್ಶ ಅಳವಡಿಸಿಕೊಳ್ಳಲು ಮುಳ್ಳೂರ ಕರೆ
ಕಲಾದಗಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಎನ್‌ಎಸ್‌ಎಸ್ ಘಟಕಗಳ ಆಶ್ರಯದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ 161ನೇ ಜಯಂತಿ ನಡೆಯಿತು.
ನೆಲಮೂಲ ಸಂಸ್ಕೃತಿಯ ಹಬ್ಬ ಎಳ್ಳ ಅಮವಾಸ್ಯೆ: ಡಾ.ವೀರೇಶ ಬಡಿಗೇರ
ಗುಳೇದಗುಡ್ಡ: ತಾಲೂಕಿನ ತೆಗ್ಗಿ ಗ್ರಾಮದ ಡಾ.ಚಂದ್ರಶೇಖರ ಕಾಳನ್ನವರ ಹೊಲದಲ್ಲಿ ಗುರುವಾರ ಎಳ್ಳ ಅಮವಾಸ್ಯೆ ಚರಗ ಚೆಲ್ಲುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೀರೇಶ ಬಡಿಗೇರ ನಮ್ಮ ದೇಶಿಯ ಪರಂಪರೆ ಮತ್ತು ನೆಲಮೂಲ ಸಂಸ್ಕೃತಿಯ ಹಬ್ಬವಾದ ಎಳ್ಳ ಅಮವಾಸ್ಯೆಯನ್ನು ರೈತಾಪಿ ವರ್ಗದ ಜನ ಸಡಗರ, ಸಂಭ್ರಮದಲ್ಲಿ ಹಿಂದಿನಿಂದಲೂ ಆಚರಿಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಇದ್ದರು. ಪವಿತ್ರಾ ಜಕ್ಕಪ್ಪನವರ್ ಮತ್ತು ಬಸವರಾಜ ಸಿಂದಗಿಮಠ ಅವರ ತಂಡದಿಂದ ಜಾನಪದ ಗೀತಗಾಯನ ಚರಗ ಸಂಭ್ರಮಕ್ಕೆ ಮೆರುಗೆ ತಂದಿತು.
ಸ್ವಾಮಿ ವಿವೇಕಾನಂದರ ಪುಸ್ತಕ ಪ್ರದರ್ಶನ
ಇಳಕಲ್ಲ: ನಗರದ ಗಾಯತ್ರಿ ಮಹಿಳಾ ಸಂಘದ ಕನ್ನಡ ಶಿಶುವಿಹಾರ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯುತ್ಸವ ಆಚರಿಸಲಾಯಿತು. ಸ್ವಾಮಿ ವಿವೇಕಾನಂದ ಜೀವನ ಸಾಧನೆ ಕುರಿತಾದ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು. ಶಿಕ್ಷಕರಾದ ಮಂಜುನಾಥ ಕನ್ನೂರ ವಂದಿಸಿದರು. ಶಿಕ್ಷಕಿ ವೇದಾವತಿ ದಟ್ಟಿ ನಿರೂಪಿಸಿದರು .ಶಿಕ್ಷಕರಾದ ಅಂಬಣ್ಣ ಯರಗೇರಿ ಶಿಕ್ಷಕಿಯರಾದ ಮಾಲಾ ಕೊಳದೂರ, ಲಕ್ಷ್ಮೀ ಪುರೋಹಿತ, ಕಾಮಾಕ್ಷಿ ಹೂಲಗೇರಿ, ಚೌಡಮ್ಮ ಮೆದಿಕೇರಿ, ಸಿದ್ದಮ್ಮ ಜೋಗಿನ, ಶ್ರುತಿ ಪರದೇಸಿ, ಸುನಿತಾ ಮಸ್ಕಿ ಹಾಗೂ ಸಿಬ್ಬಂದಿ ಮತ್ತು ಪಾಲಕರು ಹಾಜರಿದ್ದರು.
ಬಡಜನರಿಗೆ ಆರೋಗ್ಯ ಉಚಿತ ತಪಾಸಣೆ ಶಿಬಿರಗಳ ಸಹಕಾರಿ: ಶಾಸಕ ಸಿದ್ದು ಸವದಿ
ರಬಕವಿ-ಬನಹಟ್ಟಿ: ನಗರದ ವಿಶ್ವಚೇತನ ಜ್ಞಾನ ಯೋಗಾಶ್ರಮದಲ್ಲಿ ಲಿಂಗರಾಜ ಗ್ರಾಮೀಣಾಭಿವೃದ್ಧಿ ಸೇವಾ ಸಂಘದಿಂದ ನೇತ್ರ ಶಸ್ತ್ರಚಿಕತ್ಸಾ ಉಚಿತ ಶಿಬಿರ ಹಾಗೂ ನೇತ್ರದಾನ ನೋಂದಣಿ ಕಾರ್ಯಕ್ರಮ ಶುಕ್ರವಾರ ಜರುಗಿತು. ತೇರದಾಳ ಶಾಸಕ ಸಿದ್ದು ಸವದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೂರಾರು ಜನರ ನೇತ್ರ ತಪಾಸಣೆ ಮಾಡಿಸಿಕೊಂಡರು. ಅಗತ್ಯ ಇರೋರಿಗೆ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ಕ್ರೀಡೆಯಿಂದ ದೈಹಿಕ, ಮಾನಸಿಕ ಶಕ್ತಿ ವೇದ್ಧಿ:ಡಾ.ಗಿರೀಶ
ಬಾಗಲಕೋಟೆ: ವಿದ್ಯಾ ಪ್ರಸಾರಕ ಮಂಡಳದ ಶಂಕ್ರಪ್ಪ ಸಕ್ರಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 162ನೇ ಜನ್ಮದಿನೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟ ನಡೆಯಿತು. ವಿದ್ಯಾ ಪ್ರಸಾರಕ ಮಂಡಳದ ಗೌರವ ಕಾರ್ಯದರ್ಶಿ ಡಾ.ಗಿರೀಶ ಮಾಸೂರಕರ ಕಾರ್ಯಕ್ರಮ ಉದ್ಘಾಟಿಸಿದರು.ಭೀಮಸೇನ ಸೇಡಂಕರ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡೆಯಲ್ಲಿ ಯಶಸ್ಸು ಸಾಧಿಸಿದ ಸಾಧಕರನ್ನು ಸ್ಮರಿಸಿದರು.
ವಿದ್ಯಾರ್ಥಿಗಳು ಪರಿಶ್ರಮಕ್ಕೆ ಹೆಚ್ಚು ಒತ್ತು ನೀಡಬೇಕು: ಡಾ.ಜಿನದತ್ತ
ಧಾರವಾಡ ಜೆಎಸ್‌ಎಸ್‌ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿನದತ್ತ ಹಡಗಲಿ ಮಾತನಾಡಿ ವಿದ್ಯಾರ್ಥಿಗಳ ಜೀವನ ಒಂದು ತಪಸ್ಸು ಇದ್ದಂತೆ. ಆ ತಪಸ್ಸು ಎಂದಿಗೂ ಭಂಗವಾಗಬಾರದು. ಅಂದುಕೊಂಡ ಗುರಿಯತ್ತ ಮತ್ತು ಸಾಧನೆಯತ್ತ ಎಲ್ಲರೂ ತಮ್ಮ ಚಿತ್ತ ಹರಿಸಬೇಕು ಎಂದರು.
ಸ್ವಾಮಿ ವಿವೇಕಾನಂದರ ಪೋಷಾಕು ಧರಿಸಿ ಜನ್ಮದಿನಾಚರಣೆ
ಮಹಾಲಿಂಗಪುರ: ಸ್ಥಳೀಯ ಪ್ರಗತಿ ಪ್ರಾಥಮಿಕ ಶಾಲೆಯಲ್ಲಿ ವಿವೇಕಾನಂದರ ಪೋಷಾಕುಗಳನ್ನು ಧರಿಸಿ ಶಾಲೆಗೆ ಆಗಮಿಸಿದ ಕೆಲವು ಮಕ್ಕಳು ವಿವೇಕಾನಂದರ ಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಶುಕ್ರವಾರ ಬೆಳಗ್ಗೆ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ, ಪ್ರಗತಿ ಶಾಲೆಯ ಮಕ್ಕಳು ತಾವು ವಿದ್ಯಾಭ್ಯಾಸ ಮಾಡುವ ಶಾಲೆಗೆ ಕಾವಿ ಬಣ್ಣದ ಪೋಷಾಕುಗಳನ್ನು ಧರಿಸಿಕೊಂಡು, ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿಗಳೊಂದಿಗೆ ವಿವೇಕಾನಂದರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸ್ವಾಮಿ ವಿವೇಕಾನಂದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಎಲ್ಲಿಯೇ ಇದ್ದರೂ ಬೇರುಗಳು ಭಾರತದಲ್ಲಿರಲಿ: ನ್ಯಾಯಾಧೀಶೆ ಕವಿತಾ ಎಸ್. ಉಂಡೋಡಿ
ಜಮಖಂಡಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸ್ಥಳೀಯ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ’ರಾಷ್ಟ್ರೀಯ ಯುವಕರ ದಿನಾಚರಣೆಯನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಎಸ್. ಉಂಡೋಡಿ ಉದ್ಘಾಟಿಸಿದರು.ವಕೀಲರ ಸಂಘದ ಅಧ್ಯಕ್ಷ ಎಸ್.ಆರ್.ಕಾಡಗಿ ಮಾತನಾಡಿದರು. ಪ್ರಾಚಾರ್ಯ ಡಾ.ಟಿ.ಪಿ.ಗಿರಡ್ಡಿ ಅಧ್ಯಕ್ಷತೆ ವಹಿಸಿದ್ದರು.
ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಚಟುವಟಿಕೆ ಅವಶ್ಯ- ಡಾ.ವೆಂಕಪ್ಪ ಸುತಗೇಕರ
ಬಾಗಲಕೋಟೆ: ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ಅಂತರ ಮಹಾವಿದ್ಯಾಲಯಗಳ 14ನೇ ಯುವಜನೋತ್ಸವ ವಿಜಯ ಕಲಾ ಸಂಗಮವನ್ನು ನಗಾರಿ ಬಾರಿಸುವುದರ ಮೂಲಕ ಡಾ.ವೆಂಕಪ್ಪ ಸುತಗೇಕರ ಉದ್ಘಾಟಿಸಿದರು. ಬೆಳಗ್ಗೆ ವಿಶ್ವವಿದ್ಯಾಲಯದ ಒಂಭತ್ತು ಮಹಾವಿದ್ಯಾಲಯಗಳ ತಂಡಗಳಿಂದ ಬಾಗಲಕೋಟೆ ನವನಗರದ ಕಾಳಿದಾಸ ಸರ್ಕಲ್ ದಿಂದ ಎಂಬಿಎ ಮಹಾವಿದ್ಯಾಲಯದವರೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ಒಂಭತ್ತು ತೋಟಗಾರಿಕೆ ಮಹಾವಿದ್ಯಾಲಯಗಳ ಡೀನ್‌, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಸಚಿವ ಆರ್‌.ಬಿ. ತಿಮ್ಮಾಪೂರಗೆ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ
ಸಚಿವ ಆರ್‌.ಬಿ.ತಿಮ್ಮಾಪೂರಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಬೇಕೆಂದು ಮಾದಿಗ ಸಮಾಜದ ಮುಖಂಡರ ಆಗ್ರಹಿಸಿದ್ದಾರೆ.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved