ಬನಶಂಕರಿ ರಥೋತ್ಸವ ಅದ್ಧೂರಿಚಾಲುಕ್ಯರ ನಾಡಿನ ಆರಾಧ್ಯ ದೇವತೆ ಉತ್ತರ ಕರ್ನಾಟಕ ಭಾಗದಲ್ಲಿ ಅಧಿದೇವತೆ ಎನಿಸಿಕೊಂಡಿರುವ, ರಾಜ್ಯ ಹೊರ ರಾಜ್ಯಗಳಲ್ಲಿ ಕೋಟ್ಯವಧಿ ಭಕ್ತರನ್ನು ಹೊಂದಿರುವ ಆದಿಶಕ್ತಿ ಬಾದಾಮಿಯ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವವು ಸೋಮವಾರ ಸಂಜೆ ಗೋಧೂಳಿ ಸಮಯದಲ್ಲಿ ಲಕ್ಷಾಂತರ ಭಕ್ತರು ಜಯ ಘೋಷಗಳ ಮಧ್ಯ ವಿಜೃಂಭನೆಯಿಂದ ಜರುಕಿತು. ರಥೋತ್ಸವದಲ್ಲಿ ಪಾಲ್ಗೊಂಡು ಉತ್ತತ್ತಿ, ಹಣ್ಣು ಹೂವು ಸಮರ್ಪಿಸುವುದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ನಿರಂತರ ಒಂದು ತಿಂಗಳ ಕಾಲ ಜರುಗುವ ಜಾತ್ರೆಯ ಸವಿಯೇ ವಿಶಿಷ್ಟವಾದುದು.