ಸಾರ್ವಜನಿಕರ ಕೆಲಸವನ್ನು ಜವಾಬ್ದಾರಿಯಿಂದ ಮಾಡಿಸಭೆಗೆ ತಡವಾಗಿ ಬರುವುದು, ಗೈರಾಗುವುದು ಸರಿಯಾದ ಕ್ರಮವಲ್ಲ. ಅಧಿಕಾರಿಗಳಿರೋದೇ ಜವಾಬ್ದಾರಿಯಿಂದ ಸಾರ್ವಜನಿಕರ ಕೆಲಸ ಮಾಡಲು. ಅದನ್ನು ಬಿಟ್ಟು ಜವಾಬ್ದಾರಿ ಇಲ್ಲದಂತೆ ವರ್ತಿಸುವುದು ಎಷ್ಟು ಸರಿ ಎಂದು ಜಿಲ್ಲಾ ಲೋಕಾಯುಕ್ತರು ತಾಲೂಕು ಅಧಿಕಾರಿಗಳ ಮೇಲೆ ಗರಂ ಆದ ಘಟನೆ ಜರುಗಿತು.ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯಲ್ಲಿ ಮಂಗಳವಾರ ನಡೆದ ಗುಳೇದಗುಡ್ಡ ತಾಲೂಕಿನ ಸಾರ್ವಜನಿಕರ ಕುಂದು-ಕೊರತೆ ಮತ್ತು ಅಹವಾಲು ಸ್ವೀಕಾರ ಸಭೆಯಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ತಮ್ಮ ಅಸಮಧಾನ ವ್ಯಕ್ತಪಡಿಸಿದರು.