ಡಾ.ಅರಳಿಕಟ್ಟಿ ಸಾಧನೆ ಇತರರಿಗೂ ಮಾದರಿಅರಳಿಕಟ್ಟಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಡಾ.ತಿಮ್ಮಣ್ಣ ವಿ.ಅರಳಿಕಟ್ಟಿ ಅವರು ಅಲ್ಪಾವಧಿಯಲ್ಲಿ ಶಿಕ್ಷಣ, ಕೃಷಿ, ಸಹಕಾರಿ, ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳು ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡಿ ಇತರರಿಗೂ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಶ್ಲಾಘಿಸಿದರು.