ರೈತರನ್ನು ಸಂಕಷ್ಟಕ್ಕೆ ದೂಡುತ್ತಿರುವ ಕಾಂಗ್ರೆಸ್ ಸರ್ಕಾರರಾಜ್ಯದಲ್ಲಿ ವಕ್ಫ್ ಸಚಿವರ ಚಿತಾವಣೆಯ ಮೇರೆಗೆ ಜಿಲ್ಲಾಧಿಕಾರಿಗಳು 1974ರ ಗೆಜೆಟ್ ಕ್ರಮಕ್ಕೆ ಮುಂದಾಗಿದ್ದಾರೆ. ರೈತರು ಮಾತ್ರವಲ್ಲ, ಮಠ, ಮಂದಿರಗಳ ಆಸ್ತಿಗಳನ್ನೂ ಕಬಳಿಸುವ ಸಂಚು ರೂಪಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇದು ಖಂಡನೀಯವಾಗಿದ್ದು, ಇದನ್ನು ವಿರೋಧಿಸಿ ತಾಲೂಕು ಕೇಂದ್ರದಲ್ಲಿ ನ.5 ರಂದು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.