ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ, ವಿಜಯಪುರದ 2ನೇ ಹೆಚ್ಚುವರಿ ಹಾಗೂ ವಿಶೇಷ ನ್ಯಾಯಾಲಯವು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮಂಗಳವಾರ ಆದೇಶಿಸಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ಭೀಮಾತೀರದ ಹಂತಕ ಬಾಗಪ್ಪ ಹರಿಜನ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ, ವಿಜಯಪುರದ 2ನೇ ಹೆಚ್ಚುವರಿ ಹಾಗೂ ವಿಶೇಷ ನ್ಯಾಯಾಲಯವು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮಂಗಳವಾರ ಆದೇಶಿಸಿತು.ಪ್ರಮುಖ ಆರೋಪಿ ಪ್ರಕಾಶ ಉರ್ಫ್ ಪಿಂಟ್ಯಾ ಮೇಲಿನಕೇರಿ, ರಾಹುಲ ತಳಕೇರಿ, ಮಣಿಕಂಠ ಬೆನಕೊಪ್ಪ ಹಾಗೂ ಸುದೀಪ ಕಾಂಬಳೆ ನ್ಯಾಯಾಂಗ ಬಂಧನಕ್ಕೆ ಒಳಗಾದ ಆರೋಪಿಗಳು. ಬಾಗಪ್ಪನ ಕೊಲೆ ಕುರಿತು ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಪೊಲೀಸ್ ಕಸ್ಟಡಿ ಮುಗಿದ ಬಳಿಕ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.ಏನಿದು ಪ್ರಕರಣ?:
ಫೆಬ್ರವರಿ 11ರ ರಾತ್ರಿ ನಗರದ ಮದೀನಾ ನಗರದ ಬಾಡಿಗೆ ಮನೆಯ ಬಳಿ ವಾಕಿಂಗ್ ಮಾಡುವ ವೇಳೆ ಬಾಗಪ್ಪ ಹರಿಜನನ್ ಬರ್ಬರ ಕೊಲೆ ಪ್ರಕರಣದ ಆರೋಪಿಗಳು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಆರೋಪಿಗಳನ್ನು ಫೆ.13 ರಂದು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಿಜಯಪುರ 2ನೇ ಹೆಚ್ಚುವರಿ ಹಾಗೂ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿ ತಮ್ಮ ಕಸ್ಟಡಿಗೆ ಪಡೆದಿದ್ದರು. ಇದೀಗ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ನಾಲ್ವರನ್ನು ಹಾಜರುಪಡಿಸಲಾಗಿತ್ತು.