ಬಗರ್ ಹುಕುಂ ಸಾಗುವಳಿ ಇತ್ಯಾರ್ಥಗೊಳಿಲು ಒತ್ತಾಯ

| Published : Jul 19 2025, 02:00 AM IST

ಬಗರ್ ಹುಕುಂ ಸಾಗುವಳಿ ಇತ್ಯಾರ್ಥಗೊಳಿಲು ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿಯನ್ನು ಕಾಲಮಿತಿಯೊಳಗೆ ಇತ್ಯಾರ್ಥಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶಿರಸ್ತೆದಾರ್ ನಾಗೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು

ಕನ್ನಡಪ್ರಭ ವಾರ್ತೆ, ಹನೂರು

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿಯನ್ನು ಕಾಲಮಿತಿಯೊಳಗೆ ಇತ್ಯಾರ್ಥಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶಿರಸ್ತೆದಾರ್ ನಾಗೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪಟ್ಟಣದ ತಾಲೂಕು ಆಡಳಿತ ಕಚೇರಿ ಬಳಿ ಪ್ರತಿಭಟನೆ ನಡೆಸಿದ ವೇಳೆ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಸಿದ್ದರಾಜು ದೊಡ್ಡಿಂದುವಾಡಿ ಮಾತನಾಡಿ, ತಾಲೂಕಿನಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ದಲಿತರನ್ನು ಅರಣ್ಯ ಭೂಮಿ, ಸಾಮಾಜಿಕ ಅರಣ್ಯ ಕರಣ, ಗೋವುಗಳ ಗೋಮಾಳಗಳಿಗೆ ಕಾಯ್ದಿರಿಸುವ ನೆಪದಲ್ಲಿ ಒಕ್ಕಲು ಎಬ್ಬಿಸುವುದನ್ನು ಖಂಡಿಸಿ ಹಾಗೂ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಗಾಗಿ ವಿದೇಶಿ ಬಂಡವಾಳಗಾರರಿಗೆ ಭೂಮಿ ಕೊಡುತ್ತಿರುವುದರಿಂದ ದಲಿತರನ್ನು ಸಂಪೂರ್ಣವಾಗಿ ಭೂಮಿಯಿಂದ ಹೊರದಬ್ಬುವ ಕುತಂತ್ರವಾಗಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಇಂದು ಪ್ರಥಮ ಹಂತವಾಗಿ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಪ್ರತಿಭಟನೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.ಹಕ್ಕೋತ್ತಾಯಗಳು:

ಬಗರ್ ಹುಕುಂ ಸಾಗುವಳಿ ಕಾಲ ಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ಪರಿಶಿಷ್ಟರ ಪಿ ಟಿ ಸಿ ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡಬೇಕು. ಸುಳ್ವಾಡಿ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟಿರುವ ಮತ್ತು ಅಶ್ವಸ್ಥರಾಗಿರುವ ಕುಟುಂಬಗಳಿಗೆ ವಸತಿ ಮತ್ತು ಜಮೀನನ್ನು ಶೀಘ್ರವಾಗಿ ಮಂಜೂರು ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳನ್ನು ಉನ್ನತೀಕರಣ ಗೊಳಿಸಬೇಕೆಂದು ಒತ್ತಾಯಿಸಲಾಯಿತು.ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ ನೀಡಿ:

ಸುಳ್ವಾಡಿ ವಿಷ ಪ್ರಸಾದ ದುರಂತದಲ್ಲಿ ಮಡಿದ ಸಂಬಂಧಿಕರಿಗೆ ನಿವೇಶನ ನೀಡಲು ಮುಂದಾಗಿದ್ದು ಆದಷ್ಟು ಬೇಗ ಅದು ಅರ್ಹ ಫಲಾನುಭವಿಗೆ ತಲುಪಬೇಕು ಎಂದು ಒತ್ತಾಯ ಮಾಡಿದರು.ಇದೆ ಸಂದರ್ಭದಲ್ಲಿ ಬೈರಾನತ್ತ ಮಾದೇಶ್, ಮಾರಿಯಪ್ಪ, ವೇಲುಸ್ವಾಮಿ,ಮುರುಗೇಶ್, ಮುರುಗನ್, ಮಾದೇಶ್, ಶಿವಣ್ಣ, ನಾಗರಾಜು, ಜೈ ಗಣೇಶ್, ವೀರಪ್ಪ,ರಾಮಲಿಂಗಮ್ ಅನೇಕ ಮಹಿಳೆಯರು ಸ್ಥಳದಲ್ಲಿದ್ದರು.