ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ ಜನ್ಮ ದಿನದ ಪ್ರಯುಕ್ತ ಶಾಲೆ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಸಿಹಿ ವಿತರಿಸಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ ಜನ್ಮದಿನದ ಪ್ರಯುಕ್ತ ಶಾಲೆ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಸಿಹಿ ವಿತರಿಸಿದರು.ಅಪ್ಪಚ್ಚಕವಿ ಮೊಮ್ಮಗ ಅಪ್ಪನೆರವಂಡ ವಿನು ಮಾದಪ್ಪ ಅವರು ಅಪ್ಪಚ್ಚಕವಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪಾರಾಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಸಿಹಿ ವಿತರಿಸಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಕೇರಂ ಪೈಪೋಟಿ ಆಯೋಜಿಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ತೃತೀಯ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಪ್ರತಿ ವರ್ಷ ಅಪ್ಪಚ್ಚಕವಿ ನೆನಪಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ವಸ್ತುಗಳನ್ನು ನೀಡುತ್ತಿದ್ದಾರೆ.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ವೇದಪ್ರಸಾದ್, ಅತಿಥಿ ಶಿಕ್ಷಕಿ ಮಂಜುಳಾ, ಮತ್ತು ಅಪ್ಪನೆರವಂಡ ರಾಜೇಶ್, ನಯನ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.