ಸಾರಾಂಶ
ಕನ್ನಡಪ್ರಭ ವಾರ್ತೆ ಟಿ. ನರಸೀಪುರಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಷ್ಟ್ರಪತಿಗಳು ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷ ತಾಲೂಕು ಆಡಳಿತ ಸೌಧದ ಮುಂಭಾಗ ಮಂಗಳವಾರ ಪ್ರತಿಭಟಿಸಿದರು.ಪಟ್ಟಣದ ತಾಲೂಕು ಕಚೇರಿ ಮುಂಭಾಗ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಉದ್ಯಾನದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ, ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ, ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಅಮಿತ್ ಶಾ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಗ್ರೇಡ್ 2 ತಹಸೀಲ್ದಾರ್ ರಾಜಕಾಂತ್ ಗೆ ಮನವಿ ಪತ್ರ ಸಲ್ಲಿಸಿದರು.ಜಿಲ್ಲಾ ಕಾರ್ಯದರ್ಶಿ ಬಿ. ಮಹದೇವಸ್ವಾಮಿ, ಜಿಲ್ಲಾಧ್ಯಕ್ಷ ಪಿ. ಚಂದ್ರಶೇಖರ, ಜಿಲ್ಲಾ ಉಸ್ತುವಾರಿ ಬಸವಣ್ಣ, ಕ್ಷೇತ್ರ ಸಂಯೋಜಕ ಬಿ. ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಖಜಾಂಚಿ ಪುಟ್ಟರಾಜು, ನಂಜನಗೂಡು ತಾಲೂಕು ಅಧ್ಯಕ್ಷ ಪುರುಷನಾಥ್, ಮುಖಂಡರಾದ ಸಿದ್ದೇಶ್, ನಂಜುಂಡಸ್ವಾಮಿ. ಪ್ರವೀಣ್, ಮಹೇಶ್, ಆನಂದ್, ಮಹೇಂದ್ರ, ಹರೀಶ್, ಸೋಮೇಶ್, ಮಹದೇವಸ್ವಾಮಿ, ನಂಜುಂಡಸ್ವಾಮಿ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))