ಸಾರಾಂಶ
87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಶಾಸಕ ಮಹಾಂತೇಶ ಕೌಜಲಗಿ ಹಾಗೂ ವಿವಿಧ ಪರ ಕನ್ನಡಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಬೈಲಹೊಂಗಲ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಿಂದ ಸ್ವಾಗತಿಸಲಾಯಿತು.
ಕನ್ನಡಪ್ರಭ ವಾರ್ತೆ ಬೈಲಹೊಂಗಲ
87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಶಾಸಕ ಮಹಾಂತೇಶ ಕೌಜಲಗಿ ಹಾಗೂ ವಿವಿಧ ಪರ ಕನ್ನಡಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಿಂದ ಸ್ವಾಗತಿಸಲಾಯಿತು.ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ಅರಿವು ಸಾರುವ ಕನ್ನಡ ರಥವು ನಮ್ಮ ಹೆಮ್ಮೆ, ಕನ್ನಡ ಜ್ಯೋತಿ ಹೊತ್ತ ರಥವು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಹತ್ವ ಸಾರುತ್ತಿದೆ. ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲೆಂದು ನಾವೆಲ್ಲರೂ ಹಾರೈಸೋಣ ಎಂದರು.
ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ರಥಕ್ಕೆ ಪೂಜೆ ಸಲ್ಲಿಸಿದರು. ಕರ್ನಾಟಕ ನವ ನಿರ್ಮಾಣ ಪಡೆ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು ಹಾಗೂ ಸುಮಂಗಲೆಯರ ಕುಂಭಮೇಳ ಜ್ಯೋತಿ ಹೊತ್ತ ರಥ ಯಾತ್ರೆಗೆ ಮೆರುಗು ತಂದವು.ತಹಸೀಲ್ದಾರ್ ಎಚ್.ಎನ್. ಶಿರಹಟ್ಟಿ, ಪುರಸಭೆ ಮುಖ್ಯಾಧಿಕಾರಿ ವಿರೇಶ ಹಸಬಿ, ಪುರಸಭೆ ಮಾಜಿ ಉಪಾಧ್ಯಕ್ಷ ಮಹಾಂತೇಶ ತುರಮರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್. ಪ್ಯಾಟಿ, ಡಾ.ಎಸ್.ಎಸ್. ಸಿದ್ದನ್ನವರ, ಸದಸ್ಯ ಶಿವಾನಂದ ಕೋಲಕಾರ, ಕಂದಾಯ ನಿರೀಕ್ಷಕರಾದ ಬಸವರಾಜ ಬೋರಗಲ್, ಸುರೇಶ ಮಾಳಗಿ, ಮೋಹನ ಪಾಟೀಲ, ಎನ್.ಆರ್.ಠಕ್ಕಾಯಿ ಇದ್ದರು.