ಸಾರಾಂಶ
ಜನವರಿ 9, 11 ಮತ್ತು 12ರಂದು ರಾತ್ರಿ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ಬೆಳಗ್ಗೆ 9.02ಕ್ಕೆ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಠೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇಕ, ಜೀವ ಕಲಶಾಭಿಷೇಕ, ಪರಿಕಲಷಾಭಿಷೇಕ, ಬ್ರಹ್ಮಕಲಶಾಭಿಷೇಕ ನೆರವೇರಲಿದೆ.
ಬೆಳ್ತಂಗಡಿ: ತಾಲೂಕಿನ ಪೆರ್ಲ- ಬೈಪಾಡಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಎರಡನೇ ಬಾರಿಯ ಪುನರ್ ಪ್ರತಿಷ್ಠಾಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು ಜನವರಿ 7 ರಿಂದ 12ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ಹೇಳಿದರು.
ಅವರು ಸೋಮವಾರ ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮಾರ್ಗದರ್ಶನ ಮತ್ತು ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.7ರಂದು ಉಗ್ರಾಣ ಮುಹೂರ್ತ, ವೈದಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಳ್ಳಲಿದೆ. ಜ.7, 8 ಮತ್ತು 9ರಂದು ಹಸಿರುವಾಣಿ ಸಮರ್ಪಣೆ ನಡೆಯಲಿದೆ. ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಭಜನಾ ಸತ್ಸಂಗ, ಸಂಜೆ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಹೆಸರಾಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಯಕ್ಷಗಾನ ನಡೆಯಲಿದೆ. ಜನವರಿ 9, 11 ಮತ್ತು 12ರಂದು ರಾತ್ರಿ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ಬೆಳಗ್ಗೆ 9.02ಕ್ಕೆ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಠೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇಕ, ಜೀವ ಕಲಶಾಭಿಷೇಕ, ಪರಿಕಲಷಾಭಿಷೇಕ, ಬ್ರಹ್ಮಕಲಶಾಭಿಷೇಕ ನೆರವೇರಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಿ. ಬಾಲಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಕಾರ್ಯದರ್ಶಿ ಸತೀಶ್, ಕೋಶಾಧಿಕಾರಿ ಕೇಶವ ಗೌಡ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ ಗೌಡ, ಕಾರ್ಯದರ್ಶಿ ಉಮೇಶ್ ಗೌಡ ಇದ್ದರು.