ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾರ್ಚ್‌ ತಿಂಗಳಿನಲ್ಲಿ ಜರುಗುವ ಬ್ರಹ್ಮಕಲಶೋತ್ಸವ ಅಂಗವಾಗಿ ಮಾ. 2ರ ತನಕ ನಡೆಯುವ 48 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆ

ಮೂಲ್ಕಿ: ಭಜನೆಯಿಂದ ಭಗವಂತನನ್ನು ಒಲಿಸಲು ಸಾಧ್ಯವಿದ್ದು, ಅಧಿಕಾರದ ಆಸೆ ಬಿಟ್ಟು ಏಕ ಮನಸ್ಸಿನಿಂದ ಭಗವತಿಯ ಸೇವೆ ಮಾಡಿ ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸಬೇಕೆಂದು ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೆಡ್ಡೆ ಮಂಜುನಾಥ ಭಂಡಾರಿ ಹೇಳಿದರು.

ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾರ್ಚ್‌ ತಿಂಗಳಿನಲ್ಲಿ ಜರುಗುವ ಬ್ರಹ್ಮಕಲಶೋತ್ಸವ ಅಂಗವಾಗಿ ಮಾ. 2ರ ತನಕ ನಡೆಯುವ 48 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಗೆ ಚಾಲನೆ ನೀಡಿ ಮಾತನಾಡಿದರು.ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಆಶೀರ್ವಚನ ನೀಡಿದರು. ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಜನೆಯಿಂದ ಭಗವಂತನನ್ನು ಒಲಿಸಲು ಸಾಧ್ಯವಿದ್ದು, ಭಜನಾ ಸಂಕೀರ್ತನೆ ಯಶಸ್ವಿಯಾಗಿ ಲೋಕ ಕಲ್ಯಾಣವಾಗಲಿ ಎಂದು ಹೇಳಿದರು.ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ ಗಂಪಮನೆ ಕಟೀಲು, ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯಾ, ಅಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬ್ರಹ್ಮಕಲಶೋತ್ಸವ ಸಂಧ್ಯಾ ಭಜನಾ ಸಂಕೀರ್ತನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾ‌ರ್ ಶೆಟ್ಟಿ ಮೂಡುಶೆಡ್ಡೆ, ಅಭಿವೃದ್ಧಿ ಸಮಿತಿ ಸದಸ್ಯ ಮುರ ಸದಾಶಿವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ್ ನಾನಿಲ್ ಮತ್ತಿತರರು ಉಪಸ್ಥಿತರಿದ್ದರು. ರಾಜೇಂದ್ರ ಪ್ರಸಾದ್ ಎಕ್ಕಾರು ನಿರೂಪಿಸಿದರು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಿತು.