ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ್ ಇಟಗಿ
Author : KannadaprabhaNewsNetwork
Published : Mar 18 2026, 03:00 AM IST
ಅಡಿವೇಶ್ ಇಟಗಿ | Kannada Prabha
Image Credit: KP
೨೦೨೬ನೇ ಸಾಲಿನ ಮಾರ್ಚ್-ಏಪ್ರಿಲ್ ಮಾಹೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಬರೆಯಲು ಈಗಾಗಲೇ ಸಾಕಷ್ಟು ಅಧ್ಯಯನ ಮಾಡಿ ಪರೀಕ್ಷೆ ಬರೆಯಲು ಸಿದ್ದರಾಗಿದ್ದಾರೆ. ಈ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಭಯವಿಲ್ಲದೇ, ಒತ್ತಡ ರಹಿತ ಹಾಗೂ ಆಸಕ್ತಿಯಿಂದ ಪರೀಕ್ಷೆಗಳನ್ನು ಬರೆಯಬೇಕು. ಈ ಪರೀಕ್ಷೆಯು ನಿಮ್ಮ ಜೀವನದಲ್ಲಿ ನಿರ್ಣಾಯಕ ಹಂತವಾಗಿರುತ್ತದೆ ಎಂದು ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ್ ಇಟಗಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ

ಪ್ರಕಟಣೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭಕೋರಿದ ಅವರು, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ, ಆತ್ಮ ಸ್ಥೆರ್ಯದಿಂದ ಈ ಪರೀಕ್ಷೆಯನ್ನು ಬರೆದು ಯಶಸ್ವಿಯಾಗುವಿರಿ ಎಂದು ವಿಶ್ವಾಸವಿದೆ ಹಾಗೂ ತಮ್ಮ ಮುಂದಿನ ಜೀವನದ ಉಜ್ವಲ ಭವಿಷ್ಯಕ್ಕಾಗಿ ಇದು ಉತ್ತಮ ಅವಕಾಶವಿದ್ದು, ಇದನ್ನು ಸದುಪಯೋಗ ಪಡಿಸಿಕೊಂಡು ಮುನ್ನಡೆಯುವರೆಂದು ಆಶಾಭಾವವಿದೆ. ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಶುಭಹಾರೈಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.