ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅನ್ನ ದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ ಬಡ ಜನರ ಸೇವೆಯನ್ನು ನಿರಂತರವಾಗಿ ಮಾಡಿದರು. ರಾಜ್ಯ ಸೇರಿದಂತೆ ದೇಶ ವಿದೇಶಗಳಲ್ಲಿ ಮಠಗಳನ್ನು ಸ್ಥಾಪಿಸಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿದ ಮಹಾನ್ ವ್ಯಕ್ತಿ.

ಕನ್ನಡಪ್ರಭ ವಾರ್ತೆ ಮದ್ದೂರು

ತ್ರಿವಿಧ ದಾಸೋಹ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಜನರಿಗೆ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ದಾರಿ ದೀಪವಾಗಿದ್ದರು ಎಂದು ಶಾಸಕ ಕೆ.ಎಂ.ಉದಯ್ ಪ್ರಶಂಸೆ ವ್ಯಕ್ತಪಡಿಸಿದರು.

ಪಟ್ಟಣದ ಶಿವಪುರ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯಲ್ಲಿ ಚುಂಚಶ್ರೀ ಗೆಳೆಯರ ಬಳಗ, ಶ್ರೀನಾಡಪ್ರಭು ಕೆಂಪೇಗೌಡರ ಬಳಗದಿಂದ ಆಯೋಜಿಸಿದ್ದ ಬಿ.ಜಿ.ಎಸ್.ಶಿಕ್ಷಣ ಶ್ರೀಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅನ್ನ ದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ ಬಡ ಜನರ ಸೇವೆಯನ್ನು ನಿರಂತರವಾಗಿ ಮಾಡಿದರು. ರಾಜ್ಯ ಸೇರಿದಂತೆ ದೇಶ ವಿದೇಶಗಳಲ್ಲಿ ಮಠಗಳನ್ನು ಸ್ಥಾಪಿಸಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿದ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು.

ಚುಂಚಶ್ರೀ ಗೆಳೆಯಬರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ ಮಾತನಾಡಿ, ಬಳಗದಿಂದ ಭೈರವೈಕ್ಯ ಶ್ರೀಗಳ ಸ್ಮರಣೆಯನ್ನು ಪ್ರತಿ ವರ್ಷ ಆಯೋಜಿಕೊಂಡು ಬರಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜಿಎಸ್ ಶಿಕ್ಷಣ ಸೇವಾ ಶ್ರೀರತ್ನ ಪ್ರಶಸ್ತಿಯನ್ನು ಮೈಸೂರು ವಿವಿ ವಿಶ್ರಾಂತ ಕುಲಪತಿ ಡಾ.ಎನ್.ಎಸ್. ರಾಮೇಗೌಡರಿಗೆ ಖ್ಯಾತ ಹೃದಯ ರೋಗ ತಜ್ಞ ಡಾ.ಎಸ್.ಎಸ್.ಯೋಗಣ್ಣ ಪ್ರಶಸ್ತಿ ಪ್ರದಾನ ಮಾಡಿದರು.

ಶ್ರೀನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಟಿ.ರವಿಕುಮಾರ್, ನಿವೃತ್ತ ಮುಖ್ಯ ಅಭಿಯಂತರ ಎಸ್.ವಿ. ರಮೇಶ್, ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ ಅಧ್ಯಕ್ಷೆ ಪಿ.ಕಸ್ತೂರಿ ಅನಂತೇಗೌಡ, ಚುಂಚಶ್ರೀ ಗೆಳೆಯರ ಬಳಗ ಗೌರವಾಧ್ಯಕ್ಷ ಎಚ್.ಆರ್.ಅನಂತೇಗೌಡ, ಕಾರ್ಯದರ್ಶಿ ವಿ.ಟಿ.ರವಿಕುಮಾರ್, ಪ್ರಧಾನ ಸಂಚಾಲಕರಾದ ಎಸ್.ಚಂದ್ರು, ಎಂ.ಎ.ಕೃಷ್ಣ, ಉಪಾಧ್ಯಕ್ಷ ಸಿ.ಎಸ್.ಶಂಕರಯ್ಯ, ಮಹಾ ಪೋಷಕ ಸಿ.ಕೆ.ರಾಮಕೃಷ್ಣ, ಪ್ರಧಾನ ಸಂಘಟಕರಾದ ಕೆ.ಶಿವಕುಮಾರ್, ಡಿ.ಪಿ.ಶಿವಪ್ಪ ಸೇರಿದಂತೆ ಇತರರು ಇದ್ದರು.