ಇಂದು ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬಾಲಕೃಷ್ಣ ಕೊಳತ್ತಾಯರಿಗೆ ಸನ್ಮಾನ

| Published : Nov 16 2024, 12:32 AM IST

ಇಂದು ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬಾಲಕೃಷ್ಣ ಕೊಳತ್ತಾಯರಿಗೆ ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು, ದ.ಕ ಜಿಲ್ಲಾ ಸಮಿತಿ ಮಂಗಳೂರು, ಉಪ ಸಮಿತಿ ಪುತ್ತೂರು ಇವುಗಳ ವತಿಯಿಂದ ಈ ಗೌರವಾರ್ಪಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಪುತ್ತೂರಿನ ಹಿರಿಯರಾದ ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪುತ್ತೂರು ಉಪ ಸಮಿತಿಯ ಸ್ಥಾಪಕಾಧ್ಯಕ್ಷ ಎನ್. ಬಾಲಕೃಷ್ಣ ಕೊಳತ್ತಾಯ ಅವರ ೮೦ನೇ ವರ್ಷದ ಹುಟ್ಟುಹಬ್ಬದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ನ.೧೬ರಂದು ಶನಿವಾರ ಪುತ್ತೂರಿನ ರೋಟರಿ ಮನೀಷಾ ಸಭಾಭವನದಲ್ಲಿ ಮಧ್ಯಾಹ್ನ ಜರುಗಲಿದೆ.

ಈ ಬಗ್ಗೆ ಪುತ್ತೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಪ ಸಮಿತಿಯ ಅಧ್ಯಕ್ಷ ಮಿತ್ತಳಿಕೆ ಸೂರ್ಯನಾಥ ಆಳ್ವ, ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು, ದ.ಕ ಜಿಲ್ಲಾ ಸಮಿತಿ ಮಂಗಳೂರು, ಉಪ ಸಮಿತಿ ಪುತ್ತೂರು ಇವುಗಳ ವತಿಯಿಂದ ಈ ಗೌರವಾರ್ಪಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮೆಸ್ಕಾಂ ಮ್ಯಾನೇಜಿಂಗ್ ಡೈರೆಕ್ಟರ್‌ ಡಿ. ಪದ್ಮಾವತಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ಉಪಾಧ್ಯಕ್ಷ ಉರ್ಬಾನ್ ಪಿಂಟೊ, ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ವಾಮನ್ ಪೈ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಅಶೋಕ್ ಪ್ರಶಾಂತ್, ಕೋಶಾಧಿಕಾರಿ ಸಜಿತ್ ಕುಮಾರ್ ರೈ, ಉಪಾಧ್ಯಕ್ಷ ಕೃಷ್ಣಪ್ರಶಾಂತ್, ಮಾಜಿ ಅಧ್ಯಕ್ಷ ಮಹಾದೇವ ಶಾಸ್ತ್ರಿ ಮಣಿಲ ಇದ್ದರು.