ಸಾರಾಂಶ
ತಲಕಾವೇರಿಯಂತೆ ಬಲಮುರಿಯೂ ಪಾವಿತ್ರ್ಯದ ಸ್ಥಳವಾಗಿದ್ದು ಶುಕ್ರವಾರ ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕವೃಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಿತು. ಕಣ್ವ ಮುನೇಶ್ವರ ದೇವಾಲಯದಲ್ಲಿ ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು .
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಬಲಮುರಿ ಕಾವೇರಿ ನದಿಯ ತಟದಲ್ಲಿರುವ ಮುನೇಶ್ವರ ದೇವಾಲಯದ ಉತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ತಲಕಾವೇರಿಯಂತೆ ಬಲಮುರಿಯೂ ಪಾವಿತ್ರ್ಯದ ಸ್ಥಳವಾಗಿದ್ದು ಶುಕ್ರವಾರ ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕವೃಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಿತು. ಕಣ್ವ ಮುನೇಶ್ವರ ದೇವಾಲಯದಲ್ಲಿ ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು .
ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೈಯಂಡ ತಿಮ್ಮಯ್ಯ, ಆಡಳಿತ ಮಂಡಳಿ ಸದಸ್ಯರು, ಊರಿನ ತಕ್ಕ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ, ಚುನಾಯಿತ ಪ್ರತಿನಿಧಿಗಳು ಇದ್ದರು.ಅರ್ಚಕ ರವಿ ಕಲ್ಲುರಾಯ ಮಾತನಾಡಿ, ದೇವಾಲಯದಲ್ಲಿ ಕಾವೇರಿ ತೀರ್ಥ ತಂದು ವಿವಿದ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.ಮಧ್ಯಾಹ್ನ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಅನ್ನ ಸಂತರ್ಪಣೆ ಕೈಗೊಳ್ಳಲಾಯಿತು ಎಂದರು.
ದೇವಾಲಯಕ್ಕೆ ಆಗಮಿಸಿದ ಭಕ್ತ ಚೆಟ್ಟಿಮಾಡ ಬಾಲಕೃಷ್ಣ ಮಾತನಾಡಿ, ತುಲಾಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮಸ್ಥಾನ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಅಧಿಕ ಸಂಖ್ಯೆಯಲ್ಲಿ ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳುವರು. ಪ್ರತಿವರ್ಷ ಕಾವೇರಿ ತೀರ್ಥೋದ್ಭವದ ಮರುದಿನ ಬಲಮುರಿ ಜಾತ್ರೆ ನಡೆಯುವುದು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಪುಣ್ಯಸ್ಥಳ. ಇಲ್ಲಿ ಪಿಂಡ ಪ್ರದಾನ ಮಾಡಿದರೆ ತಲಕಾವೇರಿಯಲ್ಲಿ ಮಾಡಿದಷ್ಟೇ ಪುಣ್ಯ ಬರುತ್ತದೆ ಎಂಬುದು ಇಲ್ಲಿನ ನಂಬಿಕೆ ಎಂದರು.