ಸಾರಾಂಶ
ಹೊದ್ದೂರು ಗ್ರಾಮ ವ್ಯಾಪ್ತಿಯಲ್ಲಿರುವ ಕಣ್ವ ಮುನೀಶ್ವರ ದೇವಾಲಯ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಲಿದೆ. ಉತ್ಸವಕ್ಕೆ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಆರತಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.
ನಾಪೋಕ್ಲು: ಕಾವೇರಿ ತೀರದ ಪವಿತ್ರ ಯಾತ್ರಾಸ್ಥಳವಾದ ಬಲಮುರಿಯಲ್ಲಿ ಕಾವೇರಿ ಜಾತ್ರೆ ಅ.18ರಂದು ಜರುಗಲಿದ್ದು, ಅಗತ್ಯ ಸಿದ್ಧತೆ ಮಾಡಲಾಗಿದೆ.
ಹೊದ್ದೂರು ಗ್ರಾಮ ವ್ಯಾಪ್ತಿಯಲ್ಲಿರುವ ಕಣ್ವ ಮುನೀಶ್ವರ ದೇವಾಲಯ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಲಿದೆ. ಉತ್ಸವಕ್ಕೆ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಆರತಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.ತುಲಾಸಂಕ್ರಮಣದ ಸಂದರ್ಭ ಕಾವೇರಿಯ ಉಗಮಸ್ಥಾನವಾದ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಅಧಿಕ ಸಂಖ್ಯೆಯಲ್ಲಿ ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳುವರು. ಪ್ರತಿವರ್ಷ ಕಾವೇರಿ ತೀರ್ಥೋದ್ಭವದ ಮರುದಿನ ಬಲಮುರಿ ಜಾತ್ರೆ ನಡೆಯುವುದು ವಾಡಿಕೆ.
ಬಲಮುರಿಯಲ್ಲಿರುವ ಕಣ್ಣೇಶ್ವರ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಿವೆ. ಇಲ್ಲಿ ಪಿಂಡ ಪ್ರದಾನ ಮಾಡಿದರೆ ತಲಕಾವೇರಿಯಲ್ಲಿ ಮಾಡಿದಷ್ಟೇ ಪುಣ್ಯ ಬರುತ್ತದೆ ಎಂಬುದು ನಂಬಿಕೆ.