ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್‌ ಆಚರಣೆ

| Published : Jun 24 2024, 01:38 AM IST

ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್‌ ಆಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ಮೋದಿ ಪರಿಸರದ ರಕ್ಷಣೆ ಬಗ್ಗೆ ಏಕ್ ಪೇಡ್ ಮಾಕಿನಾಮ್ ಘೋಷಣೆಯಡಿ ದೇಶಾದ್ಯಂತ ಗಿಡ ನೆಡುವುದು ಮತ್ತು ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್‌ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಭಾನುವಾರ ಗಿಡ ನೆಡುವುದು ಹಾಗೂ ಸ್ವಚ್ಛತಾ ಅಭಿಯಾನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ತಾಲೂಕಿನ ಗೆಜ್ಜಲಗೆರೆ ಸಮೀಪದ ವೀರಯೋಧ ಸುಮಂತ್ ಸ್ಮಾರಕದ ಆವರಣದಲ್ಲಿ ಬಿಜೆಪಿ ಮಂಡಲ ಮತ್ತು ರೈತ ಮೋರ್ಚಾದಿಂದ ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಬಲಿದಾನ ದಿವಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಏಕ್ ಪೇಡ್ ಮಾಕಿ ನಾಮ್ ಘೋಷಣೆ ಅಡಿ ತಾಲೂಕಿನಾದ್ಯಂತ ಒಂದು ತಿಂಗಳ ಕಾಲ ಗಿಡ ನೆಡುವುದು ಮತ್ತು ಸ್ವಚ್ಛತಾ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಬಿಜೆಪಿ ಮಂಡಲದ ಅಧ್ಯಕ್ಷ ಸಿ.ಕೆ.ಸತೀಶ್ ಮಾತನಾಡಿ, ಹಿಂದೂ ಮಹಾಸಭೆ ಕಾರ್ಯಕಾರಿ ಅಧ್ಯಕ್ಷರಾಗಿ, ಸಚಿವರಾಗಿ ರಾಜನೀತಿ ಕ್ಷೇತ್ರದ ಕುಶಲ ಸಂಘಟಕರಾಗಿದ್ದ ಶ್ಯಾಂ ಪ್ರಕಾಶ್ ಮುಖರ್ಜಿ ರಾಷ್ಟ್ರದ ಹಿತದ ಜೊತೆ ಯಾವತ್ತೂ ರಾಜಿ ಮಾಡಿಕೊಳ್ಳದ ವ್ಯಕ್ತಿತ್ವ ಹೊಂದಿದ್ದರು ಎಂದು ಬಣ್ಣಿಸಿದರು.

ಪ್ರಧಾನಿ ಮೋದಿ ಪರಿಸರದ ರಕ್ಷಣೆ ಬಗ್ಗೆ ಏಕ್ ಪೇಡ್ ಮಾಕಿನಾಮ್ ಘೋಷಣೆಯಡಿ ದೇಶಾದ್ಯಂತ ಗಿಡ ನೆಡುವುದು ಮತ್ತು ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಾಮೂಹಿಕವಾಗಿ ಸಾವಿರಾರು ಗಿಡ ನೆಡುವುದು ಮತ್ತು ಸ್ವಚ್ಛತಾ ಅಭಿಯಾನ ನಡೆಸಲು ಕಂಕಣಬದ್ಧರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶೋಕ್, ಜಿಲ್ಲಾ ಉಪಾಧ್ಯಕ್ಷ ಜಿ.ಸಿ.ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಜವರೇಗೌಡ, ರೈತ ಮೋರ್ಚಾ ಅಧ್ಯಕ್ಷ ರವಿ, ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಎಸ್ಸಿ ಮೋರ್ಚಾ ಅಧ್ಯಕ್ಷ ದ್ಯಾವಪ್ಪ, ನಗರ ಘಟಕದ ಅಧ್ಯಕ್ಷ ಮಧುಕುಮಾರ್, ಮುಖಂಡರಾದ ಬೊಮ್ಮೇಶ, ವೈರಮುಡಿ, ಗೆಜ್ಜಲಗೆರೆ ಲಿಂಗರಾಜು, ಜಿ.ಪಿ. ಮೋಹನ, ಪ್ರಜ್ವಲ್, ರಾಮೇಗೌಡ ಮತ್ತಿತರರು ಪಾಲ್ಗೊಂಡಿದ್ದರು.