ಕನ್ನಡಪ್ರಭ ವಾರ್ತೆ ನಾಪೋಕ್ಲು

ಬಲ್ಲಮಾವಟಿ ಗ್ರಾಮದ ಆಯುಷ್ ಕೇಂದ್ರದ ವತಿಯಿಂದ ಆಯುಷ್ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು.

ಯೋಗ ಶಿಕ್ಷಕಿ ಪವಿತ್ರ ಯೋಗ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಗತ್ಯ ಎಂದರು.

ನೇತಾಜಿ ಪ್ರೌಢಶಾಲೆಯ ಶಿಕ್ಷಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.