ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಗುರುವಾರ ಶಿಶು ಮರಣ ಹೊಂದಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಿರುಗುಪ್ಪ ತಾಲೂಕಿನ ಶಿರಿಗೇರಿ ಗಂಗೋತ್ರಿ ಎಂಬವರು ಗಂಡು ಶಿಶುವಿಗೆ ಜನ್ಮ ನೀಡಿದ್ದರು.
ಬಾಣಂತಿಯರ ಸಾವಿನಿಂದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಂದು ಬಾಣಂತಿಯ ಸಾವು ಸಂಭವಿಸಿದೆ. ಇದರಿಂದಾಗಿ ನವೆಂಬರ್ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿದೆ.