ಕಳಪೆ ಗುಣಮಟ್ಟದ ಔಷಧ ಬಳಕೆಯಿಂದಾಗಿಯೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.